ಧಾರವಾಡ - ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಸಿಂಧೂರ ಲಕ್ಷ್ಮಣ ಪುಣ್ಯಸ್ಮರಣೆ: ಪ್ರತಿಮೆಗೆ ಗೌರವ ನಮನ

ಹುಬ್ಬಳ್ಳಿಯಲ್ಲಿ ಸಿಂಧೂರ ಲಕ್ಷ್ಮಣ ಪುಣ್ಯಸ್ಮರಣೆ: ಪ್ರತಿಮೆಗೆ ಗೌರವ ನಮನ

ಲೋಕದರ್ಶನ ವರದಿ 

ಹುಬ್ಬಳ್ಳಿಯಲ್ಲಿ ಸಿಂಧೂರ ಲಕ್ಷ್ಮಣ ಪುಣ್ಯಸ್ಮರಣೆ: ಪ್ರತಿಮೆಗೆ ಗೌರವ ನಮನ  

ಹುಬ್ಬಳ್ಳಿ, ಜುಲೈ 16: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಅಪ್ರತಿಮ ಶೂರ ಯೋಧ ಸಿಂಧೂರ ಲಕ್ಷ್ಮಣ ಅವರ ಪುಣ್ಯಸ್ಮರಣೆ ಅಂಗವಾಗಿ, ಅವರ ಶೌರ್ಯ ಮತ್ತು ಸಾಹಸವನ್ನು ಸ್ಮರಿಸಿ ಅವರ ಪ್ರತಿಮೆಗೆ ಮಾಲಾರೆ​‍್ಣ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.  

ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಧೂರ ಲಕ್ಷ್ಮಣ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.  

ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ. ಎಸ್‌. ಎಂ. ಸಾತ್ಮಾರ, ಚನಬಸಪ್ಪ ಧಾರವಾಡಶೆಟ್ಟರ, ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.  

ಈ ಸಂದರ್ಭದಲ್ಲಿ ಮಾತನಾಡಿದ ಅತಿಥಿಗಳು, ಸಿಂಧೂರ ಲಕ್ಷ್ಮಣ ಅವರ ಶೌರ್ಯ, ಸಾಹಸ, ಧೈರ್ಯ, ದಿಟ್ಟತನ ಹಾಗೂ ದೇಶಭಕ್ತಿಯನ್ನು ಸ್ಮರಿಸಿ, ಅವರ ಆದರ್ಶಗಳು ಇಂದಿನ ಯುವಜನತೆಗೆ ಪ್ರೇರಣೆಯಾಗಿವೆ ಎಂದು ಅಭಿಪ್ರಾಯಪಟ್ಟರು. 


ಸುದ್ದಿ ಓದಿ