ಹುಬ್ಬಳ್ಳಿಯಲ್ಲಿ ಸಿಂಧೂರ ಲಕ್ಷ್ಮಣ ಪುಣ್ಯಸ್ಮರಣೆ: ಪ್ರತಿಮೆಗೆ ಗೌರವ ನಮನ
Sindhura Lakshmana's death anniversary observed in Hubballi: Tributes paid to the statue.
ಲೋಕದರ್ಶನ ವರದಿ
ಹುಬ್ಬಳ್ಳಿಯಲ್ಲಿ ಸಿಂಧೂರ ಲಕ್ಷ್ಮಣ ಪುಣ್ಯಸ್ಮರಣೆ: ಪ್ರತಿಮೆಗೆ ಗೌರವ ನಮನ
ಹುಬ್ಬಳ್ಳಿ, ಜುಲೈ 16: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಅಪ್ರತಿಮ ಶೂರ ಯೋಧ ಸಿಂಧೂರ ಲಕ್ಷ್ಮಣ ಅವರ ಪುಣ್ಯಸ್ಮರಣೆ ಅಂಗವಾಗಿ, ಅವರ ಶೌರ್ಯ ಮತ್ತು ಸಾಹಸವನ್ನು ಸ್ಮರಿಸಿ ಅವರ ಪ್ರತಿಮೆಗೆ ಮಾಲಾರೆ್ಣ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಧೂರ ಲಕ್ಷ್ಮಣ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ. ಎಸ್. ಎಂ. ಸಾತ್ಮಾರ, ಚನಬಸಪ್ಪ ಧಾರವಾಡಶೆಟ್ಟರ, ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅತಿಥಿಗಳು, ಸಿಂಧೂರ ಲಕ್ಷ್ಮಣ ಅವರ ಶೌರ್ಯ, ಸಾಹಸ, ಧೈರ್ಯ, ದಿಟ್ಟತನ ಹಾಗೂ ದೇಶಭಕ್ತಿಯನ್ನು ಸ್ಮರಿಸಿ, ಅವರ ಆದರ್ಶಗಳು ಇಂದಿನ ಯುವಜನತೆಗೆ ಪ್ರೇರಣೆಯಾಗಿವೆ ಎಂದು ಅಭಿಪ್ರಾಯಪಟ್ಟರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 