ಸಿರುಗುಪ್ಪ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನ ಆಚರಣೆ ತಹಶೀಲ್ದಾರ್ ಎಂ.ಸುನಿತಾ
ಲೋಕದರ್ಶನ ವರದಿ
ಸಿರುಗುಪ್ಪ11: ತಾಲ್ಲೂಕು ಆಡಳಿತದಿಂದ ಆಗಸ್ಟ್ 15 ರಂದು 72 ನೇ ಸ್ವಾತಂತ್ರ್ಯ ದಿನವನ್ನು ಅದ್ಧೂರಿಯಾಗಿ ಆಚರಿಸಲು ತಹಶೀಲ್ದಾರ್ ಎಂ. ಸುನಿತಾ ಅವರು ತಾಲೂಕು ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಿದರು. ತಾಲ್ಲೂಕು ಕ್ರೀಡಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ 9 ಗಂಟೆಗೆ ತಹಸೀಲ್ದಾರರಿಂದ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡುವರು.
ಸಮಾರಂಭದಲ್ಲಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅಧ್ಯಕ್ಷತೆ ವಹಿಸುವರು, ಕೊಪ್ಪಳ ಕ್ಷೇತ್ರ ಲೋಕಸಭಾ ಸದಸ್ಯ ಕರಡಿ ಸಂಗಣ್ಣ, ಬಳ್ಳಾರಿ ಕ್ಷೇತ್ರ ವಿಧಾನ ಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ, ಅಲ್ಲಂವೀರಭದ್ರಪ್ಪ, ವಿಶೇಷ ಆಹ್ವಾನಿತರಾಗಿ ಆಗಮಿಸುವರು. ನಗರಸಭೆ ಅಧ್ಯಕ್ಷೆ ಎಂ.ಸವಿತಾ ಅರುಣಾ ಪ್ರತಾಪ್ ರೆಡ್ಡಿ, ತಾಲೂಕು ಪಂಚಾಯತ್ ಅಧ್ಯಕ್ಷೆ ಲಕ್ಷ್ಮಿ ಕೆ.ನಾಗೇಶಪ್ಪ, ಬಳ್ಳಾರಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಎಚ್. ಸಿ. ರಾಧಾ ದರಪ್ಪನಾಯಕ, ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಜಿ.ರವಿ, ಲಕ್ಷಮ್ಮ,ಕೋಟೆಶ್ವರ್ ರೆಡ್ಡಿ, ರತ್ನಮ್ಮ,ಅಡುವೆಯ ಸ್ವಾಮಿ, ತಾಲೂಕು ಪಂಚಾಯ್ತಿ ಸದಸ್ಯರು, ನಗರಸಭಾ ಸದಸ್ಯರು, ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಶಾಲಾ ಕಾಲೇಜು ಮಕ್ಕಳಿಂದ ಪಥ ಸಂಚಲನ ಸಾಂಸ್ಕೃತಿಕ ವಿವಿಧ ಸ್ಪಧರ್ೆ ಕಾರ್ಯಕ್ರಮಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ಪ್ರಶಸ್ತಿ ಪತ್ರ ವಿತರಣೆ. ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಡಿ. ಭಜಂತ್ರಿ, ವಿಜಯ ರಂಗಾರೆಡ್ಡಿ, ತಾಲೂಕು ಪಂಚಾಯಿತಿ ಅಲ್ಲಾಬಕ್ಷಿ, ಸಾಮಾಜಿಕ ಕಾರ್ಯಕರ್ತ ಎ. ಅಬ್ದುಲ್ ನಬಿ, ಸಾಕ್ಷರತಾ ಸಂಯೋಜಕ ಜೆ. ನಾಗೇಂದ್ರ ಗೌಡ, ನಗರಸಭೆ ಶೋಭಾ, ತೋಟಗಾರಿಕೆ ಇಲಾಖೆಯ ವಿಶ್ವನಾಥ್, ಸಮಾಜ ಕಲ್ಯಾಣ ಇಲಾಖೆಯ ಹುಲಿಗಪ್ಪ, ಗ್ರೇಡ್ 2 ತಹಶೀಲ್ದಾರ್ ಬಿ.ಮಲ್ಲೇಶಪ್ಪ, ಉಪತಹಶೀಲ್ದಾರ್ ಶಶಿಕಾಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಉಷಾ, ಕಂದಾಯ ಇಲಾಖೆಯ ಎಸ್.ಮೊಹಮ್ಮದ್ ಸಾಧಿಕ್, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಾಗಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 