ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯ ಕೊಲೆ: ವ್ಯಕ್ತಿ ಬಂಧನ
Sister's murder for insurance money: Man arrested
ಆಂಧ್ರಪ್ರದೇಶ 29: ಇನ್ಶೂರೆನ್ಸ್ ಹಣಕ್ಕಾಗಿ ಸಹೋದರಿಯನ್ನೇ ಕೊಲೆಗೈದ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.
ಈ ಸಂಬಂಧ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಾಲಪತಿ ಅಶೋಕ್ ಕುಮಾರ್ (30) ವ್ಯಕ್ತಿಯನ್ನು ಪೊಲೀಸರು
2024ರ ಫೆಬ್ರವರಿ 2 ರಂದು ಪೊದಿಲಿಯ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿತ್ತು ಎಂದು ಪೊಲೀಸರು ಮಂಗಳವಾರ ಜ.28ರಂದು ಹೇಳಿದ್ದಾರೆ.
ಅಶೋಕ್ ಕುಮಾರ್ ಉದ್ಯಮಿಯಾಗಿದ್ದರೂ ಆತ ಭಾರೀ ಸಾಲದ ಸುಳಿಯಲ್ಲಿ ಸಿಲುಕಿದ್ದ. ಕುಮಾರ್ ಜತೆ ಅವರ ಸಹೋದರಿ ವಾಸವಾಗಿದ್ದಳು. ಸಹೋದರಿ ಮದುವೆ ಆಗಿ ವಿಚ್ಛೇದನ ಪಡೆದುಕೊಂಡಿದ್ದಳು. ಅಣ್ಣನ ಜತೆ ವಾಸಿಸುತ್ತಿದ್ದಳು ಎಂದು ಪೊಲೀಸರು ಹೇಳಿದ್ದಾರೆ.
ಭಾರೀ ಸಾಲದ ಸುಳಿಯಲ್ಲಿ ಸಿಲುಕಿದ್ದ ಕುಮಾರ್ ತಂಗಿಯ ಹೆಸರಿನಲ್ಲಿ ಹಲವು ವಿಮಾ ಕಂಪನಿಗಳಲ್ಲಿ ಜೀವ ವಿಮೆ ಮಾಡಿದ್ದರು. ತಂಗಿಯನ್ನು ಕೊಲೆ ಮಾಡಿ ಅದನ್ನು ಅಪಘಾತವೆಂದು ಬಿಂಬಿಸಿ ವಿಮೆಯ 1 ಕೋಟಿ ರೂ. ಹಣವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕುಮಾರ್ ಒಂದು ಯೋಜನೆಯನ್ನು ರೂಪಿಸಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯ ದಿನ ಒಂಗೋಲ್‌ಗೆ ಆಸ್ಪತ್ರೆಗೆ ಭೇಟಿ ನೀಡುವ ನೆಪದಲ್ಲಿ ಕುಮಾರ್ ತನ್ನ ಸಹೋದರಿಯನ್ನು ಕಾರಿನಲ್ಲಿ ಕರೆದೊಯ್ದಿದ್ದ. ವಾಪಾಸ್ ಬರುವಾಗ ತಂಗಿಗೆ ನಿದ್ರೆಯ ಮಾತ್ರೆಗಳನ್ನು ನೀಡಿದ್ದ. ಇದಾದ ಬಳಿಕ ಉಸಿರುಗಟ್ಟಿಸಿ ತಂಗಿಯನ್ನು ಕೊಲೆ ಮಾಡಿ ಕಾರನ್ನು ಅಪಘಾತ ಮಾಡಲು ಯತ್ನಿಸಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.
ಈ ಘಟನೆ ಸಂಬಂಧ ಸುದೀರ್ಘವಾಗಿ ತನಿಖೆ ನಡೆಸಿದ ಪೊಲೀಸರು, ಅಶೋಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆಯ ನಂತರ ಅಧಿಕಾರಿಗಳು ಕುಮಾರ್ ನನ್ನು ಬಂಧಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 