ದೊಡ್ಡಮ್ಮ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಶಿವಕುಮಾರ್ ಹಿರೇಮಠ ಸನ್ಮಾನ
Sivakumar Hiremath honored in the presence of Dodamma Chamundeshwari
ಲಕ್ಷ್ಮೇಶ್ವರ, ಸೆ.15: ಮುಂಬರುವ 2028ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ರೈತರ ಜಮೀನಿಗೆ ತೆರಳುವ ರಸ್ತೆ, ಗ್ರಾಮಗಳ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಆಲಿಸಿ, ಅವುಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ 1008 ಬಡವರ ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಶಿರಹಟ್ಟಿ ಮತಕ್ಷೇತ್ರದ ಸೇವಾಕಾಂಕ್ಷಿ ಬಿ.ಟಿ. ಚಂದ್ರಶೇಖರ್ ಅವರು, ತಮ್ಮ ಹುಟ್ಟೂರು ಚಿಕ್ಕಮಗಳೂರು ತಾಲೂಕಿನಲ್ಲಿ ನಿರ್ಮಿಸಿರುವ ದೊಡ್ಡಮ್ಮ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಿರಹಟ್ಟಿ ಮತಕ್ಷೇತ್ರದ ಯುವ ನಾಯಕರಾದ ಶಿವಕುಮಾರ್ ಹಿರೇಮಠ ಅವರನ್ನು ದೇವಸ್ಥಾನದ ಅರ್ಚಕರ ಮೂಲಕ ಸನ್ಮಾನಿಸಿ ಗೌರವಿಸಲಾಯಿತು. ಬೋವಿ ವಡ್ಡರ ಸಮಾಜದ ಮುಖಂಡರಾದ ಹನುಮಂತಪ್ಪ ವಡ್ಡರ, ತಿರುಪತಿ ವಡ್ಡರ, ತಿಮ್ಮಪ್ಪ ವಡ್ಡರ, ಸಿದ್ದಣ್ಣ ವಡ್ಡರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 