ತೆಲಂಗಾಣದಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ: ಆರು ಮಂದಿ ಸಾವು, ಹಲವರಿಗೆ ಗಾಯ
ಸೂರ್ಯಾಪೇಟ (ತೆಲಂಗಾಣ), ಆ. 26: ತೆಲಂಗಾಣದ ಸೂರ್ಯಾಪೇಟ ಜಿಲ್ಲೆಯ ಕೊಡಾಡ್ ಮಂಡಲದಲ್ಲಿ ಬುಧವಾರ ಮುಂಜಾನೆ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್‌ನಿಂದ ಆಂಧ್ರಪ್ರದೇಶದ ಏಲೂರಿಗೆ ಸುಮಾರು 42 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.
ಅಪಘಾತದ ತೀವ್ರತೆಗೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.