ಪೂಂಚ್ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವು, ಮೂವರಿಗೆ ಗಾಯ

ಪೂಂಚ್ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವು, ಮೂವರಿಗೆ ಗಾಯ Six Killed, Three Injured in Poonch Road Accident

ಜಮ್ಮು, ಆಗಸ್ಟ್ 26: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಕಾರೊಂದು ಅಪಘಾತಕ್ಕೀಡಾದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪೂಂಚ್‌ನಿಂದ ಶಿಂದ್ರಾ ಕಡೆಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಶೆರಾಜ್ ಅಹ್ಮದ್, ನಜಾಕತ್ ಹುಸೇನ್, ಮೊಹಮ್ಮದ್ ಶಫೀಕ್, ಮುಸರತ್ ಹುಸೇನ್, ಜುಲ್ಫತ್ ಬಿ ಮತ್ತು ಮೊಹಮ್ಮದ್ ವಾಸಿದ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಶಿಂದ್ರಾದ ಸೊಕರ್ ಮೊಹಲ್ಲಾ ನಿವಾಸಿಗಳಾಗಿದ್ದಾರೆ.

ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.