ನೈತಿಕ ಶಿಕ್ಷಣದಿಂದ ಕೌಶಲ್ಯಾಭಿವೃದ್ಧಿ ಸಾಧ್ಯ: ಜಯಂತ ಕೆ.ಎಸ್
ಧಾರವಾಡ 12: ವಿದ್ಯಾಸಂಸ್ಥೆಗಳು ಕೇವಲ ಕಟ್ಟಡಗಳಲ್ಲ, ದೇವಾಲಯಗಳಿದ್ದಂತೆ. ಇಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯೊಂದಿಗೆ, ನೈತಿಕತೆಯನ್ನು ಬಿತ್ತುವ ಕಾರ್ಯ ನಡೆಯುತ್ತದೆ. ನೈತಿಕ ಶಿಕ್ಷಣದಿಂದ ಕೌಶಲ್ಯಾಭಿವೃದ್ದಿಯ ಜೊತೆಗೆ ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕುವಲ್ಲಿ ಸಹಕಾರಿಯಾಗುತ್ತದೆ ಎಂದು ಸ್ವಾಮಿ ವಿವೇಕಾನಂದ ಯುಥ್ ಮೂಮೆಂಟ್ ನ ಪ್ರಾದೇಶಿಕ ಅಧಿಕಾರಿಗಳಾದ ಜಯಂತ್ ಕೆ.ಎಸ್ ರವರು ಹೇಳಿದರು.
ಒಳ್ಳೆಯ ವಿಚಾರಗಳನ್ನು ವಿದ್ಯಾರ್ಥಿಗಳ ಮನಸಿನಲ್ಲಿ ಬಿತ್ತಬೇಕು. ಆಗ ಮಾತ್ರ ಉತ್ತಮ ಸಮಾಜಕ್ಕೆ ನಿರ್ಮಾಣಕ್ಕೆ ಒಳ್ಳೆಯ ಪ್ರಜೆಗಳು ದೊರಕಲು ಸಾಧ್ಯ. ಈ ನಿಟ್ಟಿನಲ್ಲಿ ಜೆ.ಎಸ್.ಎಸ್ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುತ್ತಾ ಬಂದಿದೆ ಎಂದು ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಡಿ.ಆರ್.ಹೆಚ್ ಸಭಾಭವನದಲ್ಲಿ ಜೆ.ಎಸ್.ಎಸ್ ಮಂಜುನಾಥೇಶ್ವರ ಹಾಗೂ ಕೌಶಲ್ಯ ಐ.ಟಿ.ಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಸ್ವಾಮಿ ವಿವೇಕಾನಂದ ಯುಥ್ ಮೂಮೆಂಟ್ ನ ಪ್ರಾದೇಶಿಕ ಅಧಿಕಾರಿಗಳಾದ ಜಯಂತ್ ಕೆ.ಎಸ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ತಾಂತ್ರಿಕ ತರಬೇತಿಯೊಂದಿಗೆ ಸಮುದಾಯಗಳೊಂದಿಗೆ ಬೆರೆತು ಸಮಾಜಮುಖಿ ಕೆಲಸಗಳಲ್ಲಿ ತೊಡಗಬೇಕು. ಇದು ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ಬೆಳೆಸಲು ಹಾಗೂ ಭವಿಷ್ಯ ರೂಪಿಸಿಕೊಳ್ಳಲು ಸಹಾಯ ಮಾಡುತ್ತದೆ. ಶಿಸ್ತು, ಸಂಯಮ, ಸಮಯ ಪರಿಪಾಲನೆ ಮೂಲ ಮಂತ್ರವಾಗಬೇಕು. ಆತ್ಮವಿಶ್ವಾಸದಿಂದ ಮಾಡಿದ ಯಾವುದೇ ಕೆಲಸವಾದರೂ ಯಶಸ್ಸನ್ನು ಪಡೆಯುತ್ತದೆ ಎಂದು ಹೇಳಿದರು.
ಜೆ.ಎಸ್.ಎಸ್ ಐ.ಟಿ.ಐ ಕಾಲೇಜಿನ ಪ್ರಾಚಾರ್ಯರಾದ ಮಹಾವೀರ ಉಪಾದ್ಯೆಯವರು ಪ್ರಾಸ್ತಾವಿಕವಾಗಿ ಮಾತನಾಡಿ ಐ.ಟಿ.ಐ ತರಬೇತಿ ಪಡೆದವರಿಗೆ ಉತ್ತಮ ಭವಿಷ್ಯವಿದ್ದು, ಸಾಕಷ್ಟು ಉದ್ಯೊಗವಕಾಶಗಳಿವೆ. ಬೆಳೆಯುತ್ತಿರುವ ತಂತ್ರಜ್ಞಾನ, ಮಹಿಳೆಯರಿಗೆ, ನಿರುದ್ಯೊಗಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನೂತನ ಕೋರ್ಸುಗಳನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಪರಿಚಯಿಸಿದ್ದು, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಸೆಯಂತೆ ಜೆ.ಎಸ್.ಎಸ್ ನ ಎರಡು ಐ.ಟಿ.ಐ ಕಾಲೇಜುಗಳಲ್ಲಿ ಅತ್ಯುತ್ತಮ ಕೋರ್ಸುಗಳು ಕಲಿಯಲು ಲಭ್ಯವಿದ್ದು, ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿ ನೀಡಿ ಉದ್ಯೋಗ ದೊರಕಿಸುವ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಕೈಗಾರಿಕೆಗಳಲ್ಲಿ ಆನ್‌ಜಾಬ್ ತರಬೇತಿಗೆ ನಿಯೋಜಿಸಿ ಹೆಚ್ಚಿನ ಪ್ರಾಯೊಗಿಕ ಜ್ಞಾನದೊಂದಿಗೆ ಶಿಷ್ಯವೇತನ ನೀಡುವ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ಹೇಳಿದರು.
ವಿನಾಯಕ ಗವಳಿ ಸ್ವಾಗತಿಸಿದರು. ಪ್ರಾರಂಭದಲ್ಲಿ ಅಶ್ವಿನಿ ದೇಸಾಯಿ ಪ್ರಾರ್ಥಿಸಿದರು. ವಿದ್ಯಾ ಹಿರೇಮಠ ವಂದಿಸಿದರು. ಮಂಜುನಾಥ ಚಟ್ಟೇರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಹಾಗು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 