ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ  Skill development training is essential for the economic empowerment of women


ಕೊಪ್ಪಳ, ಸೆ.16: ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಮಹಿಳೆಯರ ಆರ್ಥಿಕ ಸಬಲೀಕರಣ ಅತ್ಯಂತ ಮುಖ್ಯವಾಗಿದ್ದು, ಮಹಿಳೆಯರು ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮೀನಾಕ್ಷಿ ಬಣ್ಣದ ಭಾವಿ ಹೇಳಿದರು.  

ಕೊಪ್ಪಳ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಹಾಗೂ ಸದಸ್ಯರ ತಂಡದೊಂದಿಗೆ ಕೌಶಲ್ಯಾಭಿವೃದ್ಧಿ ಯೋಜನೆಯಡಿ ನಡೆಯುತ್ತಿರುವ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ, ತರಬೇತಿ ಕಾರ್ಯವನ್ನು ವೀಕ್ಷಿಸಿ ಅವರು ಮಾತನಾಡಿದರು.  

ಮಗ್ಗದ ಕೆಲಸ ಹಾಗೂ ಡಿಸೈನರ್ ಬ್ಲೌಸ್ ಎಂಬ್ರಾಯ್ಡರಿ ತರಬೇತಿ ಶಿಬಿರದ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು. ತರಬೇತಿ ಮೂಲಕ ಕೌಶಲ್ಯ ಗಳಿಸಿ ಸ್ವಯಂ ಉದ್ಯೋಗ ಕೈಗೊಳ್ಳುವುದರಿಂದ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇಂತಹ ತರಬೇತಿಗಳು ಪ್ರೋತ್ಸಾಹದಾಯಕವಾಗಿವೆ ಎಂದರು.  

ಈ ಸಂದರ್ಭದಲ್ಲಿ ತರಬೇತಿದಾರರನ್ನು ಕ್ಲಬ್ ಪರವಾಗಿ ಸನ್ಮಾನಿಸಿ ಶುಭ ಹಾರೈಸಲಾಯಿತು. ಕ್ಲಬ್ ಕಾರ್ಯದರ್ಶಿ ಶ್ರೀದೇವಿ ಪಾಟೀಲ್, ಎಲ್‌ಎಸ್‌ಒ ಲತಾ ಪಟ್ಟಣಶೆಟ್ಟಿ, ಖಜಾಂಚಿ ಶಿಲ್ಪಾ ರಾಜು ಶಶಿಮಠ, ಕಾರ್ಯಕಾರಿ ಸಮಿತಿ ಸದಸ್ಯೆ ಶರಣಮ್ಮ ಪಾಟೀಲ್, ಹಿರಿಯ ಸದಸ್ಯೆ ಡಾ. ರಾಧಾ ಕುಲಕರ್ಣಿ ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು, ಮಹಿಳಾ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.