ಬೆಂಗಳೂರಿನಲ್ಲಿ ಸ್ಮಿತ್ ಶತಕ ಸಂಭ್ರಮ
ಬೆಂಗಳೂರು, ಜ.19 : ಆಸ್ಟ್ರೇಲಿಯಾ ತಂಡದ ಭರವಸೆಯ ಆಟಗಾರ ಹಾಗೂ ವಿಶ್ವದ ಮಾಜಿ ನಂಬರ್ ಬ್ಯಾಟ್ಸ್ ಮನ್ ಸ್ಟೀವನ್ ಸ್ಮಿತ್ ಬೆಂಗಳೂರಿನ ಎಂ.ಚಿನ್ನಸ್ವಾಮಿ ಅಂಗಳದಲ್ಲಿ ಅಭಿಮಾನಿಗಳಿಗೆ ಹಬ್ಬದೂಟ ಉಣ ಬಡಿಸಿದ್ದಾರೆ.
ಆಸೀಸ್ ಮೊದಲು ಬ್ಯಾಟಿಂಗ್ ಮಾಡಿತು. ತಂಡದ ಭರವಸೆಯ ಆಟಗಾರ ಸ್ಮಿತ್ ತಂಡಕ್ಕೆ ಸಂಕಷ್ಟದಲ್ಲಿ ನೆರವಾದರು. ಮಧ್ಯಮ ಕ್ರಮಾಂಕದಲ್ಲಿ ಮನರ್ಾಸ್ ಲಾಬುಶೇನ್ ಅವರೊಂದಿಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದ ಸ್ಮಿತ್, ಆಸೀಸ್ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು.
ಬ್ಯಾಟಿಂಗ್ ಸ್ವರ್ಗ ಎಂದೇ ಕರೆಯಲ್ಪಡುವ ಚಿನ್ನಸ್ವಾಮಿಯಲ್ಲಿ ಸ್ಮಿತ್, ಅಬ್ಬರಿಸಿದರು. ರಾಜ್ ಕೋಟ್ ನಲ್ಲಿ ಕೈಗೂಡದ ಆಸೆಯನ್ನು ಬೆಂಗಳೂರಿನಲ್ಲಿ ಈಡೇರಿಸಿಕೊಂಡರು. ಟೀಮ್ ಇಂಡಿಯಾದ ಯುವ ಹಾಗೂ ಅನುಭವಿ ಬೌಲರ್ ಗಳನ್ನು ಕೆಚ್ಚೆದೆಯಿಂದ ಎದುರಿಸಿದ ಸ್ಮಿತ್, ತಮ್ಮ ವೃತ್ತಿ ಜೀವನದಲ್ಲಿ 27ನೇ ಬಾರಿ ಮೂರಂಕಿ ಮುಟ್ಟಿ ಸಂಭ್ರಮಿಸಿದರು
ಸ್ಟೀವನ್ ಸ್ಮಿತ್ 132 ಎಸೆತಗಳಲ್ಲಿ 14 ಬೌಂಡರಿ, 1 ಸಿಕ್ಸರ್ ನೆರವಿನಿಂದ 131 ರನ್ ಬಾರಿಸಿ ತಂಡಕ್ಕೆ ನೆರವಾದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 