ಧಾರವಾಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್. ಅಧಿಕಾರ ಸ್ವೀಕಾರ
Snehal R. assumes office as new Deputy Commissioner of Dharwad District
ಧಾರವಾಡ ಫೆ.11: ಕರ್ನಾಟಕ ಸರಕಾರದ ರಾಷ್ಟ್ರೀಯ ಜೀವನೊಪಾಯ ಅಭಿಯಾನದ ನಿರ್ದೆಶಕರಾಗಿದ್ದ ಮತ್ತು 2017-18 ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಹಿರಿಯ ಐಎಎಸ್ ಅಧಿಕಾರಿ ಸ್ನೇಹಲ್.ಆರ್ ಅವರು ಇಂದು (ಫೆ.11) ಬೆಳಿಗ್ಗೆ ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು.
ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ. ಆರ್. ಜೆ. ಅವರನ್ನು ನಿನ್ನೆ ದಿನ ರಾಜ್ಯ ಸರಕಾರ ವರ್ಗಾವಣೆ ಮಾಡಿ, ಆದೇಶಿಸಿರುವ ಹಿನ್ನೆಲೆಯಲ್ಲಿ ಸ್ನೇಹಲ್.ಆರ್. ಅವರು ಇಂದು ಧಾರವಾಡ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಭುವನೇಶ ಪಾಟೀಲ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಐಎಎಸ್ ಪ್ರೊಬೇಷನರಿ ಅಧಿಕಾರಿ ರೀತಿಕಾ ವರ್ಮಾ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಸ್ತಕ ನೀಡಿ, ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಪದಾಧಿಕಾರಿಗಳು, ಹಿತೈಷಿಗಳು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 