ಸಾಮಾಜಿಕ ಪರಿಶೋಧನಾ ಶಾಲಾ ಸಭೆ
Social Exploration School Meeting
ತಾಳಿಕೋಟಿ08: ಜಿಲ್ಲಾ ಪಂಚಾಯತ,ವಿಜಯಪುರ ಮತ್ತು ತಾಲೂಕ ಪಂಚಾಯತ, ತಾಳಿಕೋಟಿ, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಬೆಂಗಳೂರು,ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ,ವಿಜಯಪುರ2025-2026ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮತ್ತು ಕ್ಷೀರ ಭಾಗ್ಯ ಯೋಜನೆಗಳ ಸಾಮಾಜಿಕ ಪರಿಶೋಧನಾ ಶಾಲಾಸಭೆ ಬ್ರಹ್ಮಲಿಂಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಕಿರಣ ಎಚ್.ಪಾಟೀಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೈತ್ರಾ.ರಾಠೋಡ ನಿರ್ದೇಶಕರು ಸಾಮಾಜಿಕ ಪರಿಶೋಧನಾ ಇಲಾಖೆ ನಿರ್ದೇಶಕಿ ಮೈತ್ರಾ ರಾಥೋಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಕ್ಕಳಿಗೆ ಪೌಷ್ಟಿಕಾಂಶ ಹಾಗೂ ಬಿಸಿ ಊಟದ ಮಹತ್ವ ವಿವರಿಸಿ, ಈ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಬಿಸಿ ಊಟ ಸೇವಿಸುತ್ತಿದ್ದಾರೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಜೆ.ಎಮ್.ಕೊಣ್ಣೂರ, ಹಾಗೂ ಎಸ್.ಎಸ್.ಪಾಟೀಲ ಇದ್ದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಶಿಕ್ಷಕ ಬಿ.ಆಯ್.ಹಿರೇಹೊಳಿ ನಿರೂಪಿಸಿ ವಂದಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 