ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯ
ಶಿಂದೊಳ್ಳಿ ೨೪: ತಾಲ್ಲೂಕಿನ ಶಿಂದೊಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳ “ಸ್ನೇಹಿತರ ಬಳಗ” ವತಿಯಿಂದ ಸರ್ಕಾರಿ ಶಾಲೆಯಲ್ಲಿ ನೂತನವಾಗಿ ಆರಂಭವಾದ ಎಲ್ಕೆಜಿ ಮತ್ತು ಯುಕೆಜಿ ತರಗತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಉತ್ತಮ ಗುಣಮಟ್ಟದ ಟೇಬಲ್ ಹಾಗೂ ಕುರ್ಚಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಪ್ರಧಾನ ಗುರುಗಳಾದ ಹಂಚಿನಮನಿ ಅವರು, ಹಳೆ ವಿದ್ಯಾರ್ಥಿಗಳು ಹಾಗೂ ಸ್ನೇಹಿತರ ಬಳಗದ ಸದಸ್ಯರು ಶಾಲೆಯ ಅಭಿವೃದ್ಧಿಗೆ ನೀಡುತ್ತಿರುವ ಸಹಕಾರ ಶ್ಲಾಘನೀಯ. ಶಾಲೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.
ಸಮಾಜ ಸೇವಕ ವೀರಭದ್ರಯ್ಯ ಪೂಜಾರ ಮಾತನಾಡಿ, “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ” ಎಂಬ ಭಗವದ್ಗೀತೆಯ ಸಂದೇಶದAತೆ ಫಲಾಪೇಕ್ಷೆಯಿಲ್ಲದೆ ತಮ್ಮ ಕರ್ತವ್ಯವನ್ನು ಮಾಡಬೇಕು. ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ತೋಟಗಾರಿಕೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾರುತಿ ಕೃಷ್ಣಪ್ಪ ಗೋಳ ಹಾಗೂ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಉಮೇಶ ಬೆಳಗಾಂವಕರ ಮಾತನಾಡಿ, ವೀರಭದ್ರಯ್ಯ ಪೂಜಾರ ಅವರ ಸಲಹೆಯಂತೆ ಸ್ನೇಹಿತರ ಬಳಗದಿಂದ ಶಾಲೆಗೆ ಶೈಕ್ಷಣಿಕ ಸಾಮಗ್ರಿಗಳನ್ನು ನೀಡುತ್ತಿರುವುದು ಸಂತಸ ತಂದಿದೆ. ಮುಂದೆಯೂ ಶಾಲೆಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ, ನಿರ್ದಿಷ್ಟ ಗುರಿಯೊಂದಿಗೆ ಮುನ್ನಡೆಯಬೇಕು. ಆರೋಗ್ಯಕರ ಹಾಗೂ ಉಜ್ವಲ ಜೀವನ ರೂಪಿಸಿಕೊಳ್ಳುವ ಮೂಲಕ ದೇಶದ ಭವಿಷ್ಯವನ್ನು ಕಟ್ಟುವಲ್ಲಿ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಮಾಳಿಗರಾಯ ಶಾಹಾಪುರಕರ, ಸದಸ್ಯರಾದ ಲಕ್ಷಿö್ಮÃ ಅಜರೇಕರ್, ಬಾಗುನಾಗುನವರ, ಸಮಾಜ ಸೇವಕರಾದ ಬಸವರಾಜ ತಳವಾರ, ಬಸವರಾಜ ಮೇಗಳಮರಡಿ, ಕೃಷ್ಣ ಮುಚ್ಚಂಡಿ, ಪ್ರಧಾನ ಗುರುಗಳು, ಶಿಕ್ಷಕರು, ಶಿಕ್ಷಕಿಯರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.