ಮಹಿಳಾ ಸಬಲೀಕರಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಮಹಾದೇವ ಸ್ವಾಮೀಜಿ
Societal development is possible through women's empowerment: Mahadeva Swamiji
ಕುಕನೂರಿನಲ್ಲಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಂಭ್ರಮ
ಕುಕನೂರು 1: ಪಟ್ಟಣದ ಅನ್ನದಾನೀಶ್ವರ ಶಾಖಾಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಪೂಜ್ಯ ಮಹಾದೇವ ಸ್ವಾಮೀಜಿ ಆಶೀರ್ವಚನ ನೀಡಿ, "ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾದಾಗ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಜ್ಞಾನ ವಿಕಾಸ ಯೋಜನೆ ಗ್ರಾಮೀಣ ಮಹಿಳೆಯರಲ್ಲಿ ಸ್ವಾವಲಂಬನೆಯ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ" ಎಂದು ಹೇಳಿದರು. ಸ್ವಾವಲಂಬನೆಗೆ ಜ್ಞಾನ ವಿಕಾಸ ಕೇಂದ್ರದ ಕೊಡುಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಅಧಿಕಾರಿ ಶ್ರೀಶೈಲ್ ಎಚ್. ಮಾತನಾಡಿ, ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರಿಗೆ ಕೌಶಲ್ಯ ತರಬೇತಿ, ಸ್ವ-ಉದ್ಯೋಗ ಮಾರ್ಗದರ್ಶನ ಹಾಗೂ ಆರ್ಥಿಕ ಸಾಕ್ಷರತೆ ನೀಡಲಾಗುತ್ತಿದೆ. ಕುಕನೂರು ಕೇಂದ್ರವು ಕಳೆದ ಒಂದು ವರ್ಷದಲ್ಲಿ ನೂರಾರು ಮಹಿಳೆಯರ ಬದುಕಿಗೆ ಹೊಸ ದಿಕ್ಕು ನೀಡಿದೆ ಎಂದು ತಿಳಿಸಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 