ಸಂಘಟಿತ ಹೋರಾಟದಿಂದ ಸಮಸ್ಯೆಗಳಿಗೆ ಪರಿಹಾರ: ಸುಧಾಕರ ಶೆಟ್ಟಿ
Solutions to problems through organized struggle: Sudhakar Shetty
ವಿಜಯಪುರ: ಯಾವುದೇ ಸಮಸ್ಯೆಯನ್ನು ಪರಿಹರಿಸಬೇಕಾದರೆ ಒಬ್ಬರಿಂದ ಮಾತ್ರ ಸಾಧ್ಯವಿಲ್ಲ. ಸಂಘಟಿತವಾಗಿ ಹೋರಾಟ ನಡೆಸಿದಾಗ ಮಾತ್ರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕುಪ್ಮಾ ರಾಜ್ಯ ಸಮಿತಿ ಉಪಾಧ್ಯಕ್ಷ ಹಾಗೂ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಧಾಕರ ಶೆಟ್ಟಿ ಹೇಳಿದರು.
ನಗರದ ಶ್ರೀ ಶರಣಬಸವೇಶ್ವರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ್ದ ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ವಿಜಯಪುರ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಖಾಸಗಿ ಹಾಗೂ ಅನುದಾನರಹಿತ ಕಾಲೇಜುಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಂಘಟನೆಯ ಅಗತ್ಯವಿದೆ. ಕೆಲವು ಕಾಲೇಜುಗಳ ಆಡಳಿತ ಮಂಡಳಿಗಳು ಒಗ್ಗೂಡಿ ಆರಂಭಿಸಿರುವ ಈ ಸಂಘಟನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಬಲಿಷ್ಠವಾಗಿ ಬೆಳೆಯಬೇಕು ಎಂದು ಹೇಳಿದರು.
ಕುಪ್ಮಾ ಉಪಾಧ್ಯಕ್ಷ ಹಾಗೂ ಮಂಗಳೂರಿನ ಎಕ್ಸಲೆಂಟ್ ಕಾಲೇಜಿನ ಸಂಸ್ಥಾಪಕ ಯುವರಾಜ್ ಜೈನ್ ಮಾತನಾಡಿ, ಒಬ್ಬರ ಶಕ್ತಿಗಿಂತ ಹಲವರ ಶಕ್ತಿ ಒಗ್ಗೂಡಿದಾಗ ಸಂಘಟನೆ ಬಲಿಷ್ಠವಾಗುತ್ತದೆ. ಖಾಸಗಿ ಹಾಗೂ ಅನುದಾನರಹಿತ ಕಾಲೇಜುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಶಾಶ್ವತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣದ ಉಪನಿರ್ದೇಶಕ ಕೆ.ಎ. ಉಪ್ಪಾರ ಕಾರ್ಯಕ್ರಮ ಉದ್ಘಾಟಿಸಿದರು. ನಂದಿ ಶುಗರ್ಸ್ನ ನಿರ್ದೇಶಕ ಹಾಗೂ ಶ್ರೀ ಶರಣಬಸವೇಶ್ವರ ಸಮೂಹ ಶಿಕ್ಷಣ ಸಂಸ್ಥೆಗಳ ಸದಸ್ಯ ಸತ್ಯಜಿತ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣದ ಶಾಖಾಧಿಕಾರಿ ಪ್ರಕಾಶ ಗೊಂಗಡಿ, ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರ್ಮನ್ ಬಸವರಾಜ ಕೌಲಗಿ, ಜಗಜ್ಯೋತಿ ಬಸವೇಶ್ವರ ಸಂಸ್ಥೆಯ ಅಧ್ಯಕ್ಷ ಎಲ್.ಬಿ. ಪಾಟೀಲ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕುಪ್ಮಾ ವಿಜಯಪುರ ಘಟಕದ ಗೌರವಾಧ್ಯಕ್ಷರಾಗಿ ಬಸವರಾಜ ಕೌಲಗಿ, ಅಧ್ಯಕ್ಷರಾಗಿ ಎಲ್.ಬಿ. ಪಾಟೀಲ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಎಸ್. ಪೂಜಾರಿ ಹಾಗೂ ಸಿ.ಎಸ್. ಅವಟಿ, ಕಾರ್ಯದರ್ಶಿಯಾಗಿ ಹೇಮಲತಾ ಬೆನಕಟ್ಟಿ, ಜಂಟಿ ಕಾರ್ಯದರ್ಶಿಯಾಗಿ ಮೀನಾಕ್ಷಿ ಕರಡಿ, ಖಜಾಂಚಿಯಾಗಿ ಕೆ.ಎಂ. ಗುನ್ನಾಪುರ ಸೇರಿದಂತೆ ವಿವಿಧ ಪದಾಧಿಕಾರಿಗಳು ಪದಗ್ರಹಣ ಮಾಡಿದರು.
ಶ್ರೀ ಶರಣಬಸವೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಜ್ವಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಂಗಲ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಜಯತೀರ್ಥ ಕುಲಕರ್ಣಿ ವಂದಿಸಿದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 