ಗ್ರಾಮಗಳ ಅಭಿವೃದ್ಧಿಗೆ ಪಂಚಾಯಿತಿಗೆ ಹೆಚ್ಚು ಅನುದಾನ ನೀಡಲು ಸೋಮಣ್ಣ ಡಾಣಗಲ್ಲ ಅಗ್ರಹ
ಲಕ್ಷ್ಮೇಶ್ವರ 23 ; "ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಕೇಂದ್ರದ 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಯಾಗದ ಕಾರಣ ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ತೀವ್ರ ಹಿನ್ನಡೆಯಾಗುತ್ತಿರುವ ಕಾರಣ ಗ್ರಾಮೀಣ ಭಾಗದ ಜನರು ಅಸಮಾಧಾನ ಗೊಂಡಿದ್ದಾರೆ ಬರಗಾಲದ ತೀವ್ರತೆ.
ಗದಗ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 38ರಷ್ಟು ಕಡಿಮೆ ಮಳೆಯಾಗಿದ್ದು, ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರು, ಚೆಕ್ಡ್ಯಾಂ ನಿರ್ಮಾಣ ಮತ್ತು ಗ್ರಾಮೀಣ ರಸ್ತೆಗಳ ನಿರ್ವಹಣೆಗೆ ಅನುದಾನವಿಲ್ಲದೆ ಪಂಚಾಯಿತಿಗಳು ಸಂಕಷ್ಟ ಎದುರಿಸುತ್ತಿವೆ.
ಇಂಥ ಸಮಯದಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ರಾಜ್ಯದ ಗ್ರಾಮ ಪಂಚಾಯತಿಗಳಿಗೆ 15ನೇ ಹಣಕಾಸು ಅನುದಾನ ಸೇರಿದಂತೆ ಇತರೆ ಹೆಚ್ಚಿನ ಅನುದಾನವನ್ನು ಗ್ರಾಮ ಪಂಚಾಯತಿಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯಿತಿಗೆ ನೀಡಬೇಕು ಗ್ರಾಮಗಳ ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದಿದಂತೆ ಎಂದು ಮಹಾತ್ಮ ಗಾಂಧೀಜಿಯವರ ಕಂಡ ಕನಸು ನನಸಾಗಲು ಸಾಧ್ಯ.
ಆದರೆ ಇಂದಿನ ದಿನಮಾನಗಳಲ್ಲಿ ಪಂಚಾಯಿತಿಗಳಿಗೆ ಅನುದಾನವಿಲ್ಲದೆ ಪಂಚಾಯಿತಿಗಳು ಸೊರಗುತ್ತಿವೆ ಇದನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಮುಂದಾಗಬೇಕು ಎಂದು ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಹಿರಿಯ ಮುಖಂಡರಾದ ಸೋಮಣ್ಣ ಡಾಣಗಲ್ಲ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.