ಯರಗಟ್ಟಿ

ರಾಜ್ಯದಲ್ಲಿ ಶೀಘ್ರದಲ್ಲೇ 7 ಆಸ್ಪತ್ರೆಗಳು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಶೀಘ್ರದಲ್ಲೇ 7 ಆಸ್ಪತ್ರೆಗಳು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ: ದಿನೇಶ್ ಗುಂಡೂರಾವ್

ಯರಗಟ್ಟಿ 27: ಸಮುದಾಯ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು. 

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ ಶೀಘ್ರದಲ್ಲೇ 7 ಆಸ್ಪತ್ರೆಗಳನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಯರಗಟ್ಟಿಯ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಡಯಲಿಸಿಸ್ ಘಟಕವನ್ನು ಪ್ರಾರಂಭಿಸಲಾಗುವುದು ಮತ್ತು ಸಮುದಾರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಮಕ್ಕಳ ತಜ್ಞ, ಅರಿವಳಿಕೆ ತಜ್ಞ, ಎಲುಬು ಕೀಲು ತಜ್ಞರ ಹುದ್ದೆಯನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು. ಶಿಥಿಲಗೊಂಡಿರುವ ಆಸ್ಪತ್ರೆ ಹಾಗೂ ವೈದ್ಯರ ವಸತಿಗೃಹಗಳನ್ನು ಶೀಘ್ರದಲ್ಲಿ ನವೀಕರಣಗೊಳಿಸುವುದು ಹಾಗೂ ಆಸ್ಪತ್ರೆಗೆ ಬೇಕಾಗುವ ಮೆಡಿಸಿನ್ ಇನ್ನಿತರ ವಸ್ತುಗಳನ್ನು ನೀಡಲಾಗುವುದು ಮತ್ತು ಡಿಜಿಟಲ್ ಎಕ್ಸರೆ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಶಾಸಕ ವಿಶ್ವಾಸ ವೈದ್ಯ, ಡಿಜೆಡಿ ಡಾ. ಶಶಿಕಾಂತ ಮುನ್ಯಾಳ, ಡಿ.ಡಿ. ಡಾ. ಪಲ್ಲೇದ, ಜಿಲ್ಲಾ ವೈದ್ಯಾಧಿಕಾರಿ ಡಾ. ಮಹೇಶ ಕೋಣಿ, ತಾಲೂಕು ವೈದ್ಯಾಧಿಕಾರಿ ಡಾ. ಶ್ರೀಪಾದ ಸಬ್ನೀಸ್, ಸವದತ್ತಿ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಎಚ್‌. ಎಂ. ಮಲ್ಲನಗೌಡ, ಯರಗಟ್ಟಿ ಸಮುದಾಯದ ಆರೋಗ್ಯ ಕೇಂದ್ರ ವೈದ್ಯಧಿಕಾರಿ ಡಾ. ಬಿ. ಎಸ್‌. ಬಳ್ಳೂರ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಹೇಳಿಕೆ: ನೂತನವಾಗಿ ತಾಲೂಕು ಕೇಂದ್ರವಾಗಿರುವ ಯರಗಟ್ಟಿ ಸಮುದಾಯದ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವುದು, ಖಾಲಿ ಇರುವ ತಜ್ಞ ವೈದ್ಯರನ್ನು ಸಿಬ್ಬಂದಿ ನಿಯೋಜನೆ ಮಾಡುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡಿದರು. 

ವಿಶ್ವಾಸ ವೈದ್ಯ, ಶಾಸಕರು ಸವದತ್ತಿ ಮತಕ್ಷೇತ್ರ 


ಸುದ್ದಿ ಓದಿ