ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
ಸಿಯೋಲ್, ಫೆ 28 : ದಕ್ಷಿಣ ಕೊರಿಯಾದಲ್ಲಿ ಕೊರೊನಾ ಸೋಂಕಿನ 256 ಹೊಸ ಪ್ರಕರಣಗಳು ದಾಖಲಾಗಿದ್ದು ಶುಕ್ರವಾರದ ವೇಳೆಗೆ ಒಟ್ಟು ಕೊರೊನಾ ಸೋಂಕು ಪೀಡಿತರ ಸಂಖ್ಯೆ 2022 ಕ್ಕೆ ಏರಿಕೆಯಾಗಿದೆ.
ಗ್ರೀನ್ ವಿಚ್ ಕಾಲಮಾನ 00.00 ಗಂಟೆಗೆ ಒಟ್ಟು ಕೊರೊನಾ ಸೋಂಕು ಪೀಡಿತರ ಸಂಖ್ಯೆ 2022 ರಷ್ಟಿದ್ದು ಈ ಸೋಂಕಿಗೆ ಬಲಿಯಾದವರ ಸಂಖ್ಯೆ 13 ರಷ್ಟಿತ್ತು.
ದಕ್ಷಿಣ ಕೊರೊಯಾ ರೋಗ ನಿಯಂತ್ರಣ ಕೇಂದ್ರ ದಿನಕ್ಕೆರಡು ಬಾರಿ ಸ್ಥಳೀಯ ಕಾಲಮಾನ ಬೆಳಗ್ಗೆ 10 ಗಂಟೆ ಮತ್ತು ಸಂಜೆ 5 ಗಂಟೆಗೆ ಇತ್ತೀಚಿನ ಮಾಹಿತಿಯನ್ನು ಪ್ರಕಟಿಸುತ್ತಿದೆ.
ಹೊಸ ರೋಗಿಗಳ ಪೈಕಿ 182 ಜನರು ದಿಯೋಗು ನಿವಾಸಿಗಳಾಗಿದ್ದು ಇದು ರಾಜಧಾನಿ ಸಿಯೋಲ್ ನಿಂದ 300 ಕಿಲೋಮೀಟರ್ ಆಗ್ನೇಯಕ್ಕಿದೆ. 49 ಸೋಂಕಿತರು ಸಮೀಪದ ಉತ್ತರ ಗಿಯೋಂಗ್ಸಾಂಗ್ ಪ್ರಾಂತ್ಯಕ್ಕೆ ಸೇರಿದವರಾಗಿದ್ದಾರೆ. ಈ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ಕ್ರಮವಾಗಿ 1314 ಮತ್ತು 394 ಹೆಚ್ಚಳವಾಗಿದೆ.
ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು ಫೆ 19 ರಿಂದ 27 ರ ಅವಧಯಲ್ಲಿ 1735 ಹೊಸ ಪ್ರಕರಣಗಳು ವರದಿಯಾಗಿದ್ದು ಭಾನುವಾರ ದಕ್ಷಿಣ ಕೊರಿಯಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 