ಬಳ್ಳಾರಿ ಜಿಲ್ಲೆಯಲ್ಲಿ ವಿಶೇಷ ‘ರೌಡಿ ನಿಗ್ರಹ ತಂಡ’ ರಚನೆ: ಎಸ್ಪಿ ಆದೇಶ
Special 'Rowdy Control Team' formed in Ballari district: SP orders
ಬಳ್ಳಾರಿ 20: ಜಿಲ್ಲೆಯಲ್ಲಿ ರೌಡಿ ಆಸಾಮಿಗಳ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹಾಗೂ ಸಾರ್ವಜನಿಕರ ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ಅಧೀಕ್ಷಕರ ನೇರ ಉಸ್ತುವಾರಿಯಲ್ಲಿ ಜಿಲ್ಲೆಯಾದ್ಯಂತ 03 ವಿಶೇಷ “ರೌಡಿ ನಿಗ್ರಹ ತಂಡ”ಗಳನ್ನು ರಚಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಆದೇಶಿಸಿದ್ದಾರೆ.
*ಮೂರು ಉಪ-ವಿಭಾಗಗಳಲ್ಲಿ ಹದ್ದಿನ ಕಣ್ಣು:*
ರೌಡಿಗಳ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಬಳ್ಳಾರಿ ನಗರ, ಸಿರುಗುಪ್ಪ ಹಾಗೂ ತೋರಣಗಲ್ಲು ಉಪ-ವಿಭಾಗದ ಮೂವರು ಡಿ.ಎಸ್.ಪಿ. ಗಳ ನೇತೃತ್ವದಲ್ಲಿ ಈ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳಲ್ಲಿ ಸಿ.ಪಿ.ಐ., ಪಿ.ಎಸ್.ಐ. ಹಾಗೂ ನುರಿತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 