ಶ್ರಾವಣ ಮಾಸದಲ್ಲಿ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ವಿಶೇಷ ಅಭಿಷೇಕ ಪೂಜೆ

ಶ್ರಾವಣ ಮಾಸದಲ್ಲಿ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ವಿಶೇಷ ಅಭಿಷೇಕ ಪೂಜೆ  Special Abhisheka Puja at Muktimandira Dharmakshetra during the month of Shravana


ಲಕ್ಷ್ಮೇಶ್ವರ, ಆ.19:** ಸಮೀಪದ ಭೂಕೈಲಾಸ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಶ್ರಾವಣ ಮಾಸದ ನಿಮಿತ್ತ ವಿಶೇಷ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.  ಮುಕ್ತಿಮಂದಿರ ಧರ್ಮಕ್ಷೇತ್ರದ ಮಹಾತಪಸ್ವಿ ರಂಭಾಪುರಿ ಜಗದ್ಗುರು ಶ್ರೀ ವೀರಗಂಗಾಧರ ಜಗದ್ಗುರುಗಳ ಕತ್ತರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಮಹಾಪೂಜೆಗಳನ್ನು ನೆರವೇರಿಸಲಾಗುತ್ತಿದೆ. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ವೀರಗಂಗಾಧರ ಸ್ವಾಮೀಜಿಗಳ ಆಶೀರ್ವಾದ ಪಡೆಯುತ್ತಿದ್ದಾರೆ. ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪನೆ ಕಾರ್ಯವೂ ಭರದಿಂದ ಸಾಗಿದೆ. ಈ ಕಾರ್ಯಕ್ಕೆ ಅಪಾರ ಸಂಖ್ಯೆಯ ಭಕ್ತರು ಸಹಾಯ-ಸಹಕಾರ ನೀಡುತ್ತಿದ್ದು, ಶಿವಲಿಂಗಗಳ ಸ್ಥಾಪನಾ ಕಾರ್ಯ ವೇಗ ಪಡೆದುಕೊಂಡಿದೆ. ಇದರಿಂದ ಭಕ್ತರಲ್ಲಿ ಹೊಸ ಉತ್ಸಾಹ ಮೂಡಿದೆ.