ಮುಂದಗೋಡ

ಇಂದು ಶ್ರೀಕರಿಯಮ್ಮ(ಕಾಳಿಕಾ)ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ

ಇಂದು ಶ್ರೀಕರಿಯಮ್ಮ(ಕಾಳಿಕಾ)ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ

ಲೋಕದರ್ಶನ ವರದಿ

ಮುಂಡಗೋಡ:ಪ್ರತಿ ವರ್ಷದಂತೆ ಶ್ರಾವಣ ಮಾಸದ ನಿಮಿತ್ತ ಸೆ.12ರಂದು ಪಟ್ಟಣದ ಕಿಲ್ಲೆ ಓಣಿಯಲ್ಲಿರುವ ಪುರಾತನ ಇತಿಹಾಸ ಪ್ರಸಿದ್ಧ ಶ್ರೀಕರಿಯಮ್ಮ(ಕಾಳಿಕಾ)ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ ಶ್ರೀದೇವಿಗೆ ಪಂಚಾಮೃತ ಅಭಿಷೇಕ, ವಿಶೇಷ ಹೋಮ ಹವನ ನಂತರ ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಟ್ರಸ್ಟ್ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಸುದ್ದಿ ಓದಿ