ಉದ್ಯೋಗಾವಕಾಶ ಕಲ್ಪಿಸಲು ಆಗಸ್ಟ್‌ 15ರಿಂದ ವಿಶೇಷ ಅಭಿಯಾನ

ಉದ್ಯೋಗಾವಕಾಶ ಕಲ್ಪಿಸಲು ಆಗಸ್ಟ್‌ 15ರಿಂದ ವಿಶೇಷ ಅಭಿಯಾನ  Special campaign to create job opportunities starting August 15


ರೋಣ 12: ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಅಭಿವೃದ್ಧಿ-ಆಧಾರಿತ ಯೋಜನೆಯಡಿ ರೋಣ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿ ಆಗಸ್ಟ್‌ 15ರಿಂದ ವಿಶೇಷ ಜಾಗೃತಿ ಅಭಿಯಾನ ಹಾಗೂ ಜಾಬ್ ಕಾರ್ಡ್‌ ಮೇಳ ಆಯೋಜಿಸಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ತಿಳಿಸಿದ್ದಾರೆ.  

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್‌ ಮೇಳ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಅರ್ಹ ಕುಟುಂಬಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಾನವ ದಿನಗಳ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.  

ಜಾಬ್ ಕಾರ್ಡ್‌ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರೀಶೀಲಿಸಿ, ಅಗತ್ಯವಿರುವವರಿಗೆ ಹೊಸ ಜಾಬ್ ಕಾರ್ಡ್‌ ಮಾಡಿಸಿಕೊಡುವುದು, ಜಾಬ್ ಕಾರ್ಡ್‌ ನವೀಕರಣ ಹಾಗೂ ಜ-ಏಙಅ ಪ್ರಕ್ರಿಯೆ ಪೂರ್ಣಗೊಳಿಸುವುದಕ್ಕೆ ಆದ್ಯತೆ ನೀಡಲಾಗುವುದು. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆಯನ್ನೂ ಗ್ರಾಮ ಪಂಚಾಯಿತಿಗಳಲ್ಲಿ ಕಲ್ಪಿಸಲಾಗುವುದು ಎಂದು ಹೇಳಿದರು.  

ಯೋಜನೆಯ ಕುರಿತು ಮನೆ-ಮನೆ ಭೇಟಿ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಗ್ರಾಮಮಟ್ಟದಲ್ಲಿ ಸಭೆಗಳನ್ನು ನಡೆಸುವುದು, ಪೋಸ್ಟರ್ ಹಾಗೂ ಬ್ಯಾನರ್‌ಗಳ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜಾಬ್ ಕಾರ್ಡ್‌ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಸೂಚಿಸಲಾಗಿದೆ.  

ಗ್ರಾಮೀಣ ಜನರು ಯೋಜನೆಯ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬೇಕು. ಕಾರ್ಮಿಕರ ಹಾಜರಾತಿ, ಕಾಮಗಾರಿಗಳ ಪ್ರಗತಿ ಹಾಗೂ ಸಂಬಂಧಿತ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ನಿರ್ವಹಿಸಲು ಒತ್ತು ನೀಡಲಾಗುವುದು ಎಂದು ಚಂದ್ರಶೇಖರ ಬಿ. ಕಂದಕೂರ ತಿಳಿಸಿದರು.  

“ಅರ್ಹ ಕುಟುಂಬಗಳ ಮನೆಬಾಗಿಲಿಗೆ ಉದ್ಯೋಗಾವಕಾಶ ತಲುಪಿಸುವುದು ನಮ್ಮ ಪ್ರಮುಖ ಉದ್ದೇಶ. ಜಾಬ್ ಕಾರ್ಡ, ಜ-ಏಙಅ ಹಾಗೂ ಉದ್ಯೋಗದ ಬೇಡಿಕೆ ಸಲ್ಲಿಕೆ ಸೇರಿದಂತೆ ಯಾವುದೇ ಮಾಹಿತಿ ಅಗತ್ಯವಿದ್ದರೂ ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ಜನರ ಸಹಕಾರ ಅತ್ಯಂತ ಮುಖ್ಯ,” ಎಂದು ಅವರು ಮನವಿ ಮಾಡಿದರು.