ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ
Special comprehensive revision of voter list begins in Ballari district: Deputy Commissioner Nagendr
ಲೋಕದರ್ಶನ ವರದಿ
ಬಳ್ಳಾರಿ 04: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಬಳ್ಳಾರಿ ಜಿಲ್ಲಾದ್ಯಂತ 2026ರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ನಗರದ ನೂತನ ಜಿಲ್ಲಾಡಳಿತ ಭವನದ ವಿಸಿ ಹಾಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಎಷ್ಟು ಮುಖ್ಯವೋ, ಅಷ್ಟೇ ಜವಾಬ್ದಾರಿಯುತವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಅಗತ್ಯವಾಗಿದೆ. ಅರ್ಹ ಮತದಾರರು ಯಾರೂ ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
*ಮನೆ ಮನೆಗೆ ಖುದ್ದಾಗಿ ಬಿಎಲ್‌ಒ ಭೇಟಿ: ವಿಶಿಷ್ಟ ಪ್ರಕ್ರಿಯೆ*
ಜಿಲ್ಲೆಯಲ್ಲಿ 2026ರ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಪ್ರತಿಯೊಬ್ಬ ಮತದಾರರ ಮನೆ ಮನೆಗೂ ಕಡ್ಡಾಯವಾಗಿ ಭೇಟಿ ನೀಡಿ ಪರೀಶೀಲನೆ ನಡೆಸಲಿದ್ದಾರೆ. ಪ್ರತಿ ವರ್ಷ ಜನವರಿ 1ರಂದು ಮತದಾರರ ಪಟ್ಟಿಯನ್ನು ಪ್ರಕಟಿಸುತ್ತೇವೆ. ತದನಂತರ ಹೆಸರು ಸೇರೆ್ಡ (ನಮೂನೆ 6), ಕೈಬಿಡುವುದು (ನಮೂನೆ 7), ಸ್ಥಳಾಂತರ (ನಮೂನೆ 8) ಮತ್ತು ತಿದ್ದುಪಡಿ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತವೆ. ಇದು ಸಾಮಾನ್ಯವಾಗಿದ್ದು, ಪ್ರಸಕ್ತ ನಡೆಯುತ್ತಿರುವ ‘ವಿಶೇಷ ಸಮಗ್ರ ಪರಿಷ್ಕರಣೆ' (ಫೇಸ್-3) ಇದಕ್ಕಿಂತ ಸಂಪೂರ್ಣ ಭಿನ್ನವಾಗಿದೆ ಎಂದು ತಿಳಿಸಿದರು. ಸಾಮಾನ್ಯ ಪರಿಷ್ಕರಣೆಯಲ್ಲಿ ಮನೆ ಮನೆಗೆ ಹೋಗುವುದಿಲ್ಲ. ಈ ವಿಶೇಷ ಅಭಿಯಾನದಲ್ಲಿ ನಮ್ಮ ಬೂತ್ ಮಟ್ಟದ ಅಧಿಕಾರಿಗಳು 1/1/2025ರ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರ ಮನೆಗೂ ಖುದ್ದಾಗಿ ಭೇಟಿ ನೀಡಿ, ವಿವರಗಳನ್ನು ಪರೀಶೀಲಿಸಿ ದೃಢೀಕರಿಸಲಿದ್ದಾರೆ ಎಂದು ವಿವರಿಸಿದರು.
ಜೂನ್ 30 ರಿಂದ ಜುಲೈ 21ರ ವರೆಗೆ ಬಿಎಲ್‌ಒಗಳು ಪ್ರತೀ ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ನೀಡಿರುವ ಎರಡು ಪುಟಗಳ ‘ಎನ್ಯುಮರೇಷನ್ ಫಾರ್ಮ್’ (ನೋಂದಣಿ ನಮೂನೆ) ಅನ್ನು ಪ್ರತಿಯೊಬ್ಬ ಮತದಾರರಿಗೂ ತಲುಪಿಸಲಾಗುತ್ತದೆ. ಈ ಬಾರಿ ಇಂಗ್ಲೀಷ್ ಜೊತೆಗೆ ಕನ್ನಡದಲ್ಲೂ ಈ ಫಾರ್ಮ್ ಲಭ್ಯವಿರಲಿದೆ. ಮತದಾರರಿಂದ ಈ ಎರಡು ಫಾರ್ಮ್‌ಗಳನ್ನು ಭರ್ತಿ ಮಾಡಿಸಿಕೊಂಡು, ಅದರಲ್ಲಿ ಒಂದನ್ನು ಬಿಎಲ್‌ಒ ವಾಪಸ್ ಪಡೆದರೆ, ಮತ್ತೊಂದಕ್ಕೆ ಸ್ವೀಕೃತಿ ಸಹಿ ಹಾಕಿ ಮತದಾರರ ಕೈಗೆ ನೀಡಲಿದ್ದಾರೆ. ಹೆಸರು ಬಿಟ್ಟು ಹೋಗಿರುವ ಅಥವಾ ತಪ್ಪುಗಳಾಗಿರುವ ಕುರಿತು ಮತದಾರರು ಆಕ್ಷೇಪಣೆ ಅವಧಿಯಲ್ಲಿ ಈ ಸ್ವೀಕೃತಿ ಪತ್ರದೊಂದಿಗೆ ಕ್ಲೈಮ್ ಮಾಡಬಹುದಾಗಿದೆ. ಬಿಎಲ್‌ಒ ಆಪ್ ಮೂಲಕ ಇಆರ್‌ಒ (ಮತದಾರರ ನೋಂದಣಾಧಿಕಾರಿ) ಅವರಿಗೆ ವಿವರಗಳನ್ನು ಸಲ್ಲಿಸುವ ಸಂಪೂರ್ಣ ಜವಾಬ್ದಾರಿಯನ್ನು ಬಿಎಲ್‌ಒಗಳಿಗೆ ವಹಿಸಲಾಗಿದೆ ಎಂದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 