ಗದಗದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026ಕ್ಕೆ ಚಾಲನೆ
Special comprehensive revision of voters' list 2026 launched in Gadag
ಗದಗ 1: ರಾಜ್ಯವ್ಯಾಪಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026 ಕಾರ್ಯಕ್ರಮದ ಅಂಗವಾಗಿ, ಇಂದಿನಿಂದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ ಶ್ರೀಮತಿ ಬಾಗೂರ ಮೇಡಂ ಅವರು ಗದಗ ನಗರದ 23ನೇ ವಾರ್ಡ್ನ ಮತದಾರರ ನಿವಾಸಗಳಿಗೆ ಭೇಟಿ ನೀಡಿ, ಗಣತಿ ನಮೂನೆಗಳನ್ನು ವಿತರಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಎಲ್ಲಾ ಅರ್ಹ ಮತದಾರರು ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸುವಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮತದಾರರಾದ ಶ್ರೀಮತಿ ಸಹನಾ ಪಾಲಣಕರ, ಕಳಕವ್ವ ಬೋವಿ, ರೇಣವ್ವ ಪೋತ್ನಾಳ, ರಾಘವೇಂದ್ರ ಪಾಲಣಕರ ಸೇರಿದಂತೆ ಸ್ಥಳೀಯ ಮತದಾರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 