ಕವಿಗೆ ವಿಶೇಷ ಸನ್ಮಾನ, ಪುರಸ್ಕಾರ
Special honor and award for the poet
ಕೊಪ್ಪಳ, ಸೆ. 29: ಜಿಲ್ಲೆಯ ಹಿರಿಯ ರಂಗಭೂಮಿ ಕಲಾವಿದ ಹಾಗೂ ಪ್ರಶಸ್ತಿ ಪುರಸ್ಕೃತ ಹಾಲಯ್ಯ ಹುಡೇಜಾಲಿ ಅವರನ್ನು ಕವಿ ಸಂಘದ ಕವಿ ಸಮ್ಮೇಳನದಲ್ಲಿ ವಿಶೇಷವಾಗಿ ಸನ್ಮಾನಿಸಿ ಪುರಸ್ಕರಿಸಲು ಆಯ್ಕೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಸಿರಿಕೊಳ ಗ್ರಾಮದಲ್ಲಿ ಅ. 4ರಂದು ನಡೆಯಲಿರುವ ಧಾರವಾಡ ಜಿಲ್ಲಾ ಕವಿ ಸಂಘದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ ಕವಿ ಸಮ್ಮೇಳನದಲ್ಲಿ ಹಾಲಯ್ಯ ಹುಡೇಜಾಲಿ ಅವರಿಗೆ ವಿಶೇಷ ಸನ್ಮಾನ ಹಾಗೂ ಪುರಸ್ಕಾರ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಅಪರೂಪದ ಹಿರಿಯ ರಂಗಭೂಮಿ ಕಲಾವಿದರಾಗಿರುವ ಹಾಲಯ್ಯ ಹುಡೇಜಾಲಿ ಅವರು ಹಲವು ನಾಟಕಗಳನ್ನು ರಚಿಸುವುದರ ಜೊತೆಗೆ ರಂಗಭೂಮಿ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿದ್ದಾರೆ. ಅವರ ರಂಗಭೂಮಿ ಸೇವೆಯನ್ನು ಗುರುತಿಸಿ ಧಾರವಾಡ ಜಿಲ್ಲಾ ಕವಿ ಸಂಘದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ ಕವಿ ಸಮ್ಮೇಳನದಲ್ಲಿ ಅವರನ್ನು ಗೌರವಿಸಲು ನಿರ್ಧರಿಸಲಾಗಿದೆ. ಹಾಲಯ್ಯ ಹುಡೇಜಾಲಿ ಅವರನ್ನು ವಿಶೇಷ ಸನ್ಮಾನಕ್ಕೆ ಆಯ್ಕೆ ಮಾಡಿರುವುದಕ್ಕೆ ಕೊಪ್ಪಳ ಜಿಲ್ಲೆಯ ವಿವಿಧ ಸಂಘಟನೆಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿವೆ.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 