ಗುರು ಪೂರ್ಣಿಮೆ ಅಂಗವಾಗಿ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ವಿಶೇಷ ಕಾರ್ಯಕ್ರಮ
ಲೋಕದರ್ಶನ ವರದಿ
ಹುಬ್ಬಳ್ಳಿ 04: ಗುರು ಪೂರ್ಣಿಮೆ ಅಂಗವಾಗಿ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಭಾಗವಹಿಸಿ, ಶ್ರೀ ರಾಮಕೃಷ್ಣ ಪರಮಹಂಸರ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಶ್ರದ್ಧಾ-ಭಕ್ತಿಯಿಂದ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಭಾಜಿ ಕಲಾಲ್, ವಿಶ್ವೇಶ್ವರ ಹಿರೇಮಠ, ತಬಲಾ ಕಲಾವಿದ ಡಾ. ನಾಗಲಿಂಗ ಮುರಗಿ, ಪ್ರೇಮ ಕೃಷ್ಣ ಮೇಟಿ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಪ್ರಿಯಾ ಕಲಾಲ್, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ್ ಡಿ. ಹೊರಕೇರಿ, ಮಲ್ಲಿಕಾರ್ಜುನ, ಶ್ರದ್ಧಾ ನೀಲಗುಂದ, ಡಾ. ಶ್ರೀಕಾಂತ್ ಕೋನಾಪುರ, ಪ್ರಶಾಂತ್ ಚೌಡಾಪುರ, ಪ್ರಿಯಾ, ಡಾ. ವಿನಾಯಕ ಕುಲಕರ್ಣಿ, ವೀರೇಶ್ ಪಿ., ಪ್ರಭು, ಪಾಟೀಲ ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು.