ಕಂಪ್ಲಿ

ಶ್ರದ್ಧಾಭಕ್ತಿಯಿಂದ ನೆರವೇರಿದ ಬಲಕುಂದೇಶ್ವರ ತಾತನವರ ದೇವಸ್ಥಾನದ ವಿಶೇಷ ಪೂಜೆ

ಶ್ರದ್ಧಾಭಕ್ತಿಯಿಂದ ನೆರವೇರಿದ ಬಲಕುಂದೇಶ್ವರ ತಾತನವರ ದೇವಸ್ಥಾನದ ವಿಶೇಷ ಪೂಜೆ

ಕಂಪ್ಲಿ, ಆ.12: ತಾಲೂಕಿನ ದೇವಸಮುದ್ರ ಗ್ರಾಮದ ಸಹಸ್ರಾರು ಭಕ್ತರ ಆರಾಧ್ಯ ದೈವ ಶ್ರೀ ಬಲಕುಂದೇಶ್ವರ ತಾತನವರ ದೇವಸ್ಥಾನದಲ್ಲಿ ಭೀಮನ ಅಮಾವಾಸ್ಯೆ ಹಾಗೂ ಶ್ರಾವಣ ಮಾಸದ ಮೊದಲ ದಿನದ ಅಂಗವಾಗಿ ಬುಧವಾರ ವಿಶೇಷ ಪೂಜೆ ಹಾಗೂ ಪುನಸ್ಕಾರಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.  

ಶ್ರಾವಣ ಮಾಸದ ಮೊದಲ ದಿನದ ಅಂಗವಾಗಿ ದೇವಸ್ಥಾನದಲ್ಲಿ ಅರ್ಚಕ ವೀರೇಶ್ ಅವರ ಪುರೋಹಿತ್ಯದಲ್ಲಿ ಹೂವಿನ ಅಲಂಕಾರ, ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.  

ಸ್ಥಳೀಯರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಬಲಕುಂದೇಶ್ವರ ತಾತನವರ ದರ್ಶನ ಪಡೆದು ಪುನೀತರಾದರು. ಬಳಿಕ ಭಕ್ತರಿಗೆ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿತ್ತು.  ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ