ಜಾಗತಿಕ ಮತ್ತು ರಾಷ್ಟ್ರೀಯ ಮನ್ನಣೆ ಹೂವಿನಹಡಗಲಿಯಲ್ಲಿ ವಿಶೇಷ ಪೂಜೆ

ಜಾಗತಿಕ ಮತ್ತು ರಾಷ್ಟ್ರೀಯ ಮನ್ನಣೆ  ಹೂವಿನಹಡಗಲಿಯಲ್ಲಿ ವಿಶೇಷ ಪೂಜೆ Special puja at the globally and nationally recognized flower boat

ಲೋಕದರ್ಶನ ವರದಿ  

ಹೂವಿನ ಹಡಗಲಿ 12:   ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು 12 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಜಾಗತಿಕ ಮತ್ತು ರಾಷ್ಟ್ರೀಯ ಮನ್ನಣೆ  ಹಿನ್ನೆಲೆಯಲ್ಲಿ ಹೂವಿನಹಡಗಲಿ ಪಟ್ಟಣದ ಶ್ರೀ ಗೋಣಿ ಬಸವೇಶ್ವರ ದೇವಸ್ಥಾನದಲ್ಲಿ ಶಾಸಕ ಕೃಷ್ಣನಾಯ್ಕ ನೇತೃತ್ವದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ಮುಖಂಡರು ವಿಶೇಷ ಪೂಜೆ ಸಲ್ಲಿಸಿ ಸಂಭ್ರಮ  ಆಚರಿಸಿದರು. ನಡೆದ ದೇವಸ್ಥಾನದಲ್ಲಿ  ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ದಕ್ಷ ನಾಯಕತ್ವವನ್ನು ಸ್ಮರಿಸಲಾಯಿತು.

ದೇಶದ ಅಭಿವೃದ್ಧಿ, ಭದ್ರತೆ, ಆರ್ಥಿಕ ಪ್ರಗತಿ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಷ್ಠೆ ಹೆಚ್ಚಿಸುವಲ್ಲಿ ಅವರ ಕೊಡುಗೆಯನ್ನು ಪ್ರಶಂಸಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವ-ರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಮತ್ತಷ್ಟು ಶಕ್ತಿ ದೊರೆಯಲಿ ಎಂದು ಶ್ರೀ ಗೋಣಿ ಬಸವೇಶ್ವರ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೃಷ್ಣನಾಯ್ಕ ಕಳೆದ 12 ವರ್ಷಗಳಲ್ಲಿ ಭಾರತವು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಅಭಿವೃದ್ಧಿ ಮತ್ತು ಜನಕಲ್ಯಾಣ ಯೋಜನೆಗಳ ಮೂಲಕ ದೇಶ ಹೊಸ ದಿಕ್ಕಿನಲ್ಲಿ ಸಾಗುತ್ತಿದೆ.

ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವದಿಂದ ಭಾರತ ವಿಶ್ವದ ಪ್ರಮುಖ ರಾಷ್ಟ್ರಗಳ ಸಾಲಿನಲ್ಲಿಗುರುತಿಸಿಕೊಂಡಿದೆ ಎಂದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ, ತಾಲೂಕು ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ್ ಪೂಜಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾ-ರಿಗಳು, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಬೂತ್ ಮಟ್ಟದ ಕಾರ್ಯಕರ್ತರು,