ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: ಜಾಗೃತಿ ಅಭಿಯಾನ

ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: ಜಾಗೃತಿ ಅಭಿಯಾನ  Special revision of voter list: Awareness campaign

ಲೋಕದರ್ಶನ ವರದಿ

ವಿಜಯಪುರ 29: ಮತದಾರರ ಪಟ್ಟಿಯ ವಿಶೇಷ ಸಮಗ್ರ 2026  ಹಿನ್ನೆಲೆಯಲ್ಲಿ ಮತದಾರರ ನೋಂದಣಿ, ಹೆಸರು ಪರೀಶೀಲನೆ ಹಾಗೂ ತಿದ್ದುಪಡಿ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯಿತಿ ಹಾಗೂ ಸ್ವೀಪ್ ಸಮಿತಿಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯುವ ಮತದಾರರ ಭಾಗವಹಿಸುವಿಕೆ ಹೆಚ್ಚಿಸಲು ವಿಶೇಷ ಗಮನ ನೀಡಲಾಯಿತು.  

ಕಾರ್ಯಕ್ರಮದಲ್ಲಿ 18 ವರ್ಷ ಪೂರ್ಣಗೊಂಡ ಎಲ್ಲ ಯುವಕರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದರು. ಸರಿಯಾದ ಮತ್ತು ಸಂಪೂರ್ಣ ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಬಲವರ್ಧನೆಗೆ ಅಗತ್ಯವೆಂದು ಅವರು ಹೇಳಿದರು.  

 ಗ್ರಾಮ ಪಂಚಾಯಿತಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಲಾಯಿತು. ತಪ್ಪು ಮಾಹಿತಿಯನ್ನು ಸರಿಪಡಿಸಲು ಹಾಗೂ ಸ್ಥಳಾಂತರಗೊಂಡವರು ತಮ್ಮ ವಿವರಗಳನ್ನು ನವೀಕರಿಸಿಕೊಳ್ಳಲು ಸೂಚನೆ ನೀಡಲಾಗಿದೆ.  ಕಾರ್ಯಕ್ರಮದಲ್ಲಿ ಹಲವು ಕಾಲೇಜುಗಳ ಉಪನ್ಯಾಸಕರು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.