ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಶಾಸಕರಿಂದ ಮಾಹಿತಿ
ವಿಜಯಪುರ 30 : ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಮಂಗಳವಾರದಿಂದ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿದ ಅಧಿಕಾರಿಗಳಿಗೆ ಅಗತ್ಯ ಮಾಹಿತಿಯನ್ನು ಸಲ್ಲಿಸಿದರು.
ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಹಾಗೂ ಮತಗಟ್ಟೆ ಸಂಖ್ಯೆ 46ರ ಅಧಿಕಾರಿಗಳಾದ ಅಜಿತ್ ಬಿಜ್ಜೂರ ಮತ್ತು ಫಯಾಜ್ ಮಂಡೆ ಅವರು ಶಾಸಕರಿಂದ ಅಗತ್ಯ ವಿವರಗಳನ್ನು ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, ಪ್ರತಿಯೊಬ್ಬ ಮತದಾರರು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹಾಗೂ ಕುಟುಂಬದ ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.