ವೇಗವಾಗಿ ಬಂದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ: ಹೈದರಾಬಾದ್‌ನಲ್ಲಿ ಇಬ್ಬರು ಅಪ್ರಾಪ್ತರ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ
Speeding Tipper Lorry Kills Two Teenagers, Injures Another in Hyderabad
ಹೈದರಾಬಾದ್, ಜುಲೈ 26: ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತರು ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಮುಂಜಾನೆ ಹೈದರಾಬಾದ್‌ನ ಕುಕಟ್‌ಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಮೃತರನ್ನು ಮಹೇಶ್ (17) ಮತ್ತು ಲಕ್ಷ್ಮೀ ತೇಜ (17) ಎಂದು ಗುರುತಿಸಲಾಗಿದೆ. ಇವರು ಮತ್ತೊಬ್ಬ ಯುವಕನೊಂದಿಗೆ ಕ್ರಿಕೆಟ್ ಆಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ, ವೇಗವಾಗಿ ಬಂದ ಟಿಪ್ಪರ್ ಲಾರಿ ಅವರ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮಹೇಶ್ ಮತ್ತು ಲಕ್ಷ್ಮೀ ತೇಜ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಮತ್ತೊಬ್ಬ ಯುವಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿ ತಿಳಿದ ತಕ್ಷಣ ಕುಕಟ್‌ಪಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 