ಆಧ್ಯಾತ್ಮಿಕ ಕಾರ್ಯಕ್ರಮಗಳು ಮನುಷ್ಯನ ಮನಸ್ಸಿಗೆ ಆತ್ಮ ಸ್ಥೈರ್ಯ ತುಂಬುತ್ತವೆ: ಭೂಸನೂರ

ಆಧ್ಯಾತ್ಮಿಕ ಕಾರ್ಯಕ್ರಮಗಳು ಮನುಷ್ಯನ ಮನಸ್ಸಿಗೆ ಆತ್ಮ ಸ್ಥೈರ್ಯ ತುಂಬುತ್ತವೆ: ಭೂಸನೂರ

ಸಿಂದಗಿ: ದೇವಸ್ಥಾನ, ದೇವರು ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ಮನುಷ್ಯನ ಮನಸ್ಸಿಗೆ ನೆಮ್ಮದಿ ನೀಡುವ ಜೊತೆಗೆ ಆತ್ಮ ಸ್ಥೈರ್ಯ ತುಂಬುತ್ತವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. 

ತಾಲೂಕಿನ ರಾಂಪೂರ ಪಿ.ಎ. ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ಯಲ್ಲಾಲಿಂಗ ದೇವಸ್ಥಾನದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. 

ದೇವರಲ್ಲಿ ನಂಬಿಕೆ ಇಡಬೇಕು ಜೊತೆಗೆ ಕಾಯಕ ಮಾಡಿ ನಮ್ಮ ಜೀವನ ಅಭಿವೃದ್ಧಿ ಪಡೆಸಬೇಕು. ಗ್ರಾಮದಲ್ಲಿ ಯಲ್ಲಾಲಿಂಗ ದೇವಸ್ಥಾನದ ದೇವಸ್ಥಾನವನ್ನು 5 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಮಾಡಲಾಗುತ್ತಿದೆ. ಗುತ್ತಿಗೆದಾರರು ದೇವಸ್ಥಾನ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಹೇಳಿದರು. 

ಸಾನಿಧ್ಯ ವಹಿಸಿದ ಗ್ರಾಮದ ಸಂಗನಬಸವ ಆರೋಢಮಠದ ನಿತ್ಯಾನಂದ ಮಹಾರಾಜರು ಮಾತನಾಡಿ, ಶಾಸಕ ರಮೇಶ  ಭೂಸನೂರ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಗ್ರಾಮೀಣ ಅಭಿವೃರ್ದಧಿ ಕಾರ್ಯಗಳನ್ನು ಸಾಕಷ್ಟು ಮಾಡಿದ್ದಾರೆ. ಅಲ್ಲದೆ ಪ್ರಸ್ತುತ ಅವಧಿಯಲ್ಲಿ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಗ್ರಾಮಗಳ ಸಂಪರ್ಕ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಹೇಳಿದರು. 

ಇದೇ ಸಂದರ್ಭದಲ್ಲಿ ಶಾಸಕ ರಮೇಶ ಭೂಸನೂರ ಅವರನ್ನು ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಗ್ರಾಪಂ ಅಧ್ಯಕ್ಷ ನಿಂಗಣ್ಣ ಬಿಸನಾಳ, ಗ್ರಾಮದ ಹಾಲುಮತ ಸಮಾಜದ ಮುಖಂಡರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಬ್ಯಾಕೋಡ: ತಾಲೂಕಿನ ಬ್ಯಾಕೋಡ ಗ್ರಾಮದ ಯಲ್ಲಾಲಿಂಗೇಶ್ವರ ಮಠದ ದ್ವಾರಬಾಗಿಲು ಉದ್ಘಾಟನೆ ಮತ್ತು ಕಳಸಾರೋಹಣ ಕಾರ್ಯಕ್ರಮದಲ್ಲಿ ಶಾಸಕ ರಮೇಶ ಭೂಸನೂರ ಅವರು ಜ್ಯೋತಿ ಬೆಳಗಿಸಿ ಮಾತನಾಡಿ, ಭಕ್ತಿಯಿಂದ ಜಗತ್ತು ಸುಂದರ ಸುಕ್ಷೇತ್ರವಾಗಿ ಕಾಣುತ್ತದೆ. ಅಂತಹ ವಾತಾವರಣ ಬ್ಯಾಕೋಡ ಗ್ರಾಮದಲ್ಲಿ ಕಂಡುಬರುತ್ತಿದೆ. ನನ್ನ ಅಧಿಕಾರದ ಅವಧಿಯಲ್ಲಿ ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಕ್ಷೇತ್ರದಲ್ಲಿನ ಗ್ರಾಮೀಣ ಪ್ರದೇಶದ ಸಂಪರ್ಕ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಗ್ರಾಮಾಂತರ ಪ್ರದೇಶದಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಸರಕಾರದಿಂದ ಅನುದಾನವನ್ನು ಪ್ರಾಮಾಣಿಕವಾಗಿ ತಂದು ಅಭಿವೃದ್ಧಿ ಮಾಡುತ್ತೇನೆ. ವಾಹನ, ಸಾರ್ವಜನಿಕ ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆಗಳ ಮಾಹಿತಿ ಪಡೆದುಕೊಂಡಿದ್ದು, ಹಂತ ಹಂತವಾಗಿ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.  

ದ್ವಾರಬಾಗಿಲು ಉದ್ಘಾಟಿಸಿದ ಡಾ.ಮುರುಗರಾಜೇಂದ್ರ ಶ್ರೀಗಳು ಆಶೀರ್ವಚನ ನೀಡಿ, ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಜಿವನ ಪಾವನಗೊಳಿಸಿಕೊಳ್ಳ ಬೇಕು. ಈ ಭಾಗದ ಶಾಸಕ ರಮೇಶ ಭೂಸನೂರ ಒಬ್ಬ ಕ್ರಿಯಾಶೀಲ ಶಾಸಕರಾಗಿದ್ದಾರೆ. ಅವರು ಕ್ಷೇತ್ರದ ಅಭಿವೃರ್ದಧಿ ಜೊತೆಗೆ ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಬೇಕು. ತಮ್ಮ ಅಧಿಕಾರದ ಅವಧಿಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡುವ ಯೋಜನೆ ಹೊಂದಬೇಕು ಎಂದು ಹೇಳಿದರು. 

ಕರ್ನಾಟಕ ರಾಜ್ಯ ನಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿದರು. ಇಂಡಿ ಉಪವಿಭಾಗಾಧಿಕಾರಿ ಎಂ.ಎನ್‌. ಚೋರಗಸ್ತಿ, ರವಿ ನಾಯ್ಕೋಡಿ ಸೇರಿದಂತೆ ಗ್ರಾಮದ ಮುಖ್ಯಸ್ಥರು ವೇದಿಕೆ ಮೇಲೆ ಇದ್ದರು. ಯಲ್ಲಾಲಿಂಗೇಶ್ವರ ಮಹಾರಾಜರ ಭಕ್ತರು, ಗ್ರಾಮಸ್ಥರು ಭಾಗವಹಿಸಿದ್ದರು. 

ಸುದ್ದಿ ಓದಿ