ಹಾವೇರಿ17: ಪೊಲೀಸರ ದೈಹಿಕ ಮತ್ತು ಶಾರೀರಿಕ ಸದೃಢತೆಗೆ ಕ್ರೀಡೆ ಸಹಕಾರಿ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಾವೇರಿ ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜು ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ ಪೊಲೀಸ್ ವಾಷರ್ಿಕ ಕ್ರೀಡಾ ಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ಸುವ್ಯವಸ್ಥೆಗೆ ದಿನದ 24 ಗಂಟೆ ಪೊಲೀಸರು ಕರ್ತವ್ಯ ನಿರತರಾಗುತ್ತಾರೆ. ದೈನಂದಿನ ಕೆಲಸದ ಒತ್ತಡಗಳ ಮಧ್ಯ ಪೊಲೀಸರು ಶಾರೀರಿಕ ಮತ್ತು ಮಾನಸಿಕ ಸಮತೋಲನಕ್ಕೆ ಕನಿಷ್ಠ ದಿನಕ್ಕೆ ಒಂದು ತಾಸಾದರೂ ವ್ಯಾಯಾಮ ಕ್ರೀಡೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ಹಾವೇರಿ ಜಿಲ್ಲಾ ಕೇಂದ್ರದಲ್ಲಿ ಹಾಕಿ, ಪುಟ್ಬಾಲ್ನಂತಹ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಈ ಕ್ರೀಡಾ ಕೂಟದಲ್ಲಿ ಯಾವುದೇ ಬೇಧವಿಲ್ಲದೆ ಕ್ರೀಡೆಯನ್ನು ಒಟ್ಟಾಗಿ ಕ್ರೀಡಾ ಸ್ಪೂತರ್ಿಯಿಂದ ಆಟವಾಡಿ ಯಶಸ್ಸು ಸಾಧಿಸಿ ಎಂದು ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ವಹಿಸಿದ್ದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪೊಲೀಸ್ ಅಧಿಕಾರಿ ಮಾರುತಿ ಹೆಗಡೆ ನೇತೃತ್ವದಲ್ಲಿ ಕ್ರೀಡಾ ತಂಡಗಳು ಪಥಸಂಚಲನ ನಡೆಸಿದವು. ವಿವಿಧ ತಂಡಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು