ರಾಯಬಾಗ

ಕ್ರೀಡಾಕೂಟ: ನಾಲ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕ್ರೀಡಾಕೂಟ: ನಾಲ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ


ರಾಯಬಾಗ 02: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ಬಾಜೀರಾವ ಮಗದುಮ್ಮ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  

ವಿದ್ಯಾರ್ಥಿನಿ ರೇಷ್ಮಾ ತರಾಳ 100 ಮೀ. ಓಟ ಹಾಗೂ 400 ಮೀ. ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೃಥ್ವಿಕ ಮಗದುಮ್ಮ 100 ಮೀ. ಓಟ ಮತ್ತು 400 ಮೀ. ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ರಿಷಾ ಬೆಳಗಲೆ ಹ್ಯಾಮರ್ ಥ್ರೋನಲ್ಲಿ ದ್ವಿತೀಯ ಹಾಗೂ ಪೃಥ್ವಿ ಕಾಮಗೌಡ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಆದರ್ಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಈರಗೌಡ ಪಾಟೀಲ, ಆಡಳಿತ ಮಂಡಳಿ ಸದಸ್ಯರು, ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ. 


ಸುದ್ದಿ ಓದಿ