ಆದರ್ಶ ಶಾಲಾ ವಿದ್ಯಾರ್ಥಿಗಳ ಕ್ರೀಡಾ ಸಾಧನೆ; ಜಿಲ್ಲಾ ಮಟ್ಟಕ್ಕೆ ಆಯ್ಕೆ
ರಾಯಬಾಗ 04: ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣದಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಇಲಾಖಾ ಕ್ರೀಡಾ ಕೂಟಗಳಲ್ಲಿ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ಹೊಸ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ದೃಷ್ಠಿ ಬಾಹುಬಲಿ ಕಾಮಗೌಡ 200ಮೀ ಮತ್ತು 400ಮೀ ಓಟದಲ್ಲಿ ಪ್ರಥಮ ಸ್ಥಾನ, ಸೌಂದರ್ಯ ಶಿವಪ್ಪ ಚೌಗಲೆ 600ಮೀ ಓಟದಲ್ಲಿ ಪ್ರಥಮ ಸ್ಥಾನ, ಶೃತಿ ಮಿಥುನ ಗಿರಿ 100 ಮೀ. ಓಟ ಮತ್ತು 80ಮೀ ಹಡಲ್ಸನಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಆದರ್ಶ ಶಿಕ್ಷಣ ಸಂಸ್ಥೆ ಅಧ್ಯಕ್ಷ ಈರಗೌಡ ಪಾಟೀಲ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಗುರುಗಳಾದ ಎಸ್.ಬಿ.ಬೆನಾಡೆ, ದೈ.ಶಿಕ್ಷಕ ಎ.ಬಿ.ಜಮಾದಾರ, ಶಿಕ್ಷಕ ಶಿವಾನಂದ ಜಾಧವ, ಶಿಕ್ಷಕರು ಅಭಿನಂದಿಸಿದ್ದಾರೆ.