ದೈಹಿಕ, ಆರೋಗ್ಯಕ್ಕೆ ಕ್ರೀಡೆಗಳು ಅವಶ್ಯ: ಶಾಸಕ ಕೃಷ್ಣನಾಯ್ಕ
ಹೂವಿನಹಡಗಲಿ, ಆ.30: ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿದ್ದು, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು, ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.
ಪಟ್ಟಣದ ಮ.ಮ. ಪಾಟೀಲ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಪ್ರಾಮಾಣಿಕವಾಗಿ ಭಾಗವಹಿಸುವುದು ಮುಖ್ಯ ಎಂದು ಕೆಳದಿಮಠ ಎಜುಕೇಷನ್ ಸೊಸೈಟಿ ನಿರ್ದೇಶಕಿ ಎಂ.ಪಿ. ಸುಮನ ವಿಜಯ ತಿಳಿಸಿದರು.
ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಬಳಿಕ ಕೆ.ಬಿ. ವೀರಭದ್ರ್ಪ ಕ್ರೀಡಾಜ್ಯೋತಿ ಬೆಳಗಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಳದಿಮಠ ಎಜುಕೇಷನ್ ಸೊಸೈಟಿ ಅಧ್ಯಕ್ಷ ಕೆ.ಸಿ. ಸಿದ್ಧಾರ್ಥ ವಹಿಸಿದ್ದರು. ಕಾರ್ಯದರ್ಶಿ ವಿ.ಚಂದ್ರಮೌಳಿ ವಂದನೆ ಸ್ವೀಕರಿಸಿದರು.
ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ರಫಿ ಅಹ್ಮದ್ ಖವಾಸ್ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಿಇಒ ಮಂಗಳಾ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.