ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ: ಎನ್.ಆರ್.ಠಕ್ಕಾಯಿ
Sports are helpful for physical and mental health: N.R. Thakkai
ಬೈಲಹೊಂಗಲ 12: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಬಹಳ ಸಹಕಾರಿಯಾಗಿವೆ ಎಂದು ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಹೇಳಿದರು.
ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಸನ್ 2025-26 ನೇ ಸಾಲಿನ ಕ್ರೀಡಾ ಹಬ್ಬದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸೋಲು ಗೆಲುವು ಎರಡನ್ನೂ ಮಕ್ಕಳು ಸಮಾನವಾಗಿ ಸ್ವೀಕರಿಸುವ ಹಾಗೂ ಆಟಗಳಲ್ಲಿ ಉತ್ಸಾಹದಿಂದ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಕ್ರೀಡಾ ಸಾಧಕರ ಬದುಕು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಅವರು ಹೇಳಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಸ್.ಗುರುನಗೌಡರ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿನಾಯಕ ಬಡಿಗೇರ ಕ್ರೀಡಾ ಹಬ್ಬ ಉದ್ಘಾಟಿಸಿದರು. ಉಪಾಧ್ಯಕ್ಷರಾದ ರಮೇಶ ಸೂರ್ಯವಂಶಿ ಕ್ರೀಡಾ ಜ್ಯೋತಿಯನ್ನು ಸ್ವೀಕಾರ ಮಾಡಿದರು. ಮುಖ್ಯ ಅತಿಥಿಗಳಾಗಿ ಅಗಮಿಸಿದ ಎಸ್.ಡಿ.ಎಂ.ಸಿ ಪದಾಧಿಕಾರಿಗಳಾದ ರಾಮಲಿಂಗಪ್ಪ ಮೆಕ್ಕೇದ, ದುಂಡಪ್ಪ ಮಡಿವಾಳರ ಗುಂಡು ಎಸೆಯುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜೆ.ಆರ್.ನರಿ, ಎಸ್.ವಿ. ಬಳಿಗಾರ, ಎಚ್.ವಿ.ಪುರಾಣಿಕ, ಸಂತೋಷ ಸಾಳುಂಕೆ, ಎಂ. ಎನ್. ಕಾಳೆ, ವಿ.ಬಿ. ಪಾಟೀಲ, ಶಾಲಾ ಕ್ರೀಡಾ ಮಂತ್ರಿಯಾದ ಮುತ್ತುರಾಜ ಜೋಗಿಗುಡ್ಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಚೇತನಾ ಗಡಾದ ಸ್ವಾಗತಿಸಿದರು. ಮೂಗಪ್ಪ ನಾಗಣ್ಣವರ ಪ್ರಾರ್ಥಿಸಿದರು. ಶ್ರದ್ದಾ ಹೊಂಗಲ ನಿರೂಪಿಸಿದರು. ಪಲ್ಲವಿ ಸೂರ್ಯವಂಶಿ ವಂದಿಸಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 