ಕ್ರೀಡೆಯಿಂದ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಬಹುದು: ನಡಗಡ್ಡಿ
ಇಂಡಿ 22: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಕ್ರೀಡೆ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಿದರಿಂದ ದೈಹಿಕ ಸಾಮರ್ಥ್ಯ ಮತ್ತು ಉತ್ತಮ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಇಂಡಿ ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡಗಡ್ಡಿ ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡುತಾಂಡಾದಲ್ಲಿ ಹಮ್ಮಿಕೊಳ್ಳಲಾಗಿದ್ದ 2024-25 ನೇ ಸಾಲಿನ ತಡವಲಗಾ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ನಿಯಮಿತ ವ್ಯಾಯಾಮವು ಬೋಜ್ಜು, ಹೃದಯ ಮತ್ತು ಇತರೆ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಸಹಾಯ ಆಗುತ್ತೆ. ಇತ್ತಿಚೀನ ದಿನಗಳಲ್ಲಿ ಪೋಷಕರು ಖಾಸಗಿ ಶಾಲೆಗಳ ಮೋಹಕ್ಕೆ ಒಳಗಾಗಿ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸಕ್ಕೆ ಬಿಟ್ಟು ಬರಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗಿ ಕ್ರೀಡೆಯಿಂದ ದೂರು ಉಳಿದು ದೈಹಿಕವಾಗಿ ಖಿನ್ನತೆಗೆ ಒಳಗಾಗುತ್ತಿರುವ ತುಂಬಾ ನೋವಿನ ಸಂಗತಿಯಾಗಿದೆ. ಇದರಿಂದ ಮೂವತ್ತು ನಾಲ್ವತ್ತು ವರ್ಷಗಳಲ್ಲಿ ಬಿಪಿ ಶುಗರ್ ಹಂತಾ ಕಾಯಿಲೆಗಳು ಬರುತ್ತವುದು ತುಂಬಾ ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದರು.
ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನಂದಾ ವಾಲಿಕಾರ ಮಾತನಾಡಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಅನುದಾನವನ್ನು ಶಾಲೆಗಳ ಕಂಪೌಂಡ್, ಶೌಚಾಲಯ, ಆಟದ ಮೈದಾನ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.ದೈಹಿಕ ಶಿಕ್ಷಣ ಸಮನ್ವಯಾಧಿಕಾರಿ ಹಣಮಂತ ಮಾಲಗೊಂಡ, ಬಸವರಾಜ ಮೇತ್ರಿ, ಸಿಆರ್ಪಿ ಪ್ರಕಾಶ್ ರಾಠೋಡ, ಅಲ್ಲಾಬಕ್ಷ ವಾಲಿಕಾರ, ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಶರಣು ಐರೋಡಗಿ, ಶಿಕ್ಷಣ ಸಂಯೋಜಕರಾದ ಆನಂದ ಹುಣಸಿಗಿ, ಎಸ್ ಸಿ ಗಿಡಗಂಟಿ, ಪ್ರೇಮಾ ಹುಬ್ಬಳ್ಳಿ, ಟಿ ಕೆ ಜಂಬಗಿ, ಎಸ್ ಬಿ ಸಿರಗಾನೂರ, ಎಂ ಜಿ ಚವ್ಹಾಣ,ಆರ್ ಎಂ ಪಾಯಗೊಂಡಿ, ಹಾಗೂ ವಿವಿಧ ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.