ಚಿಕ್ಕೋಡಿ

ಮಾನಸಿಕ, ದೈಹಿಕ ಸಾಮರ್ಥ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಸಂಸದ ಪ್ರಕಾಶ

ಮಾನಸಿಕ, ದೈಹಿಕ ಸಾಮರ್ಥ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಸಂಸದ ಪ್ರಕಾಶ
ಚಿಕ್ಕೋಡಿ: ತಾಲೂಕಿನ ಮುಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಿಮಿತ್ಯವಾಗಿ ಹಮ್ಮಿಕೊಂಡಿದ್ದ ಹೊನಲು ಬೆಳಕಿನ ಮಹಿಳಾ ಕಬಡ

ಚಿಕ್ಕೋಡಿ17:  ಮಹಿಳೆಯರಿಗೆ ಅವಕಾಶ ನೀಡಿದರೆ ಎಲ್ಲಾ ರಂಗಗಳಲ್ಲಿ ಸಾಧನೆ ಮಾಡಬಲ್ಲಳು. ಪುರುಷರಗಿಂತ ನಾವೆನೂ ಕಡಿಮೆ ಇಲ್ಲಾ ಎಂಬುದನ್ನು ಬಹಳಷ್ಟು ಮಹಿಳೆಯರು ಸಾಧನೆ ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿದರು. 

ತಾಲೂಕಿನ ಮುಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ  ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತÀರಿಗೆ ಬಹುಮಾನ ವಿತರಣಾ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಸಾಕಷ್ಟು ಕಲೆಗಳಿವೆ ಅವರಿಗೆ ಅವಕಾಶ ನೀಡಿದರೆ ಅವರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು. ಇತ್ತಿಚಿನ ದಿನಗಳಲ್ಲಿ ದೇಶಿಯ ಕ್ರೀಡೆಗಳು ಯುವಕರಿಂದ ಕಣ್ಮರೆಯಾಗುತ್ತಿರುವದು ವಿಷಾಧನೀಯ ಸಂಗತಿ ಎಂದರು. ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ವೃದ್ಧಿಗೆ ಕ್ರೀಡೆಗಳು ಸಹಕಾರಿಯಾಗಿದೆ. ಕಬಡ್ಡಿ ಆಟ ಇದು ದೇಶಿಯ ಕ್ರೀಡೆಯಾಗಿದ್ದು ಇಂತಹ ಸ್ಪರ್ಧೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ  ಏರ್ಪಡಿಸುವ ಮೂಲಕ ದೇಶಿಯ ಕ್ರೀಡೆಗಳನ್ನು ಉಳಿಸಿಕೊಂಡು ಹೋಗುವಂತೆ ಕರೆ ನೀಡಿದರು.

ಕಮತೇನಟ್ಟಿಯ ಗುರುದೇವರ ಸ್ವಾಮಿಜಿ ಸಾನಿಧ್ಯ ವಹಿಸಿದ್ದರು. 

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ ಜಾರಕಿಹೊಳಿ, ಹಿರಿಯ ಮುಖಂಡ ಬಿ.ಆರ್.ಸಂಗಪ್ಪಗೋಳ, ರಾಯಬಾಗ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಈರಗೌಡ ಪಾಟೀಲ, ಮಾಜಿ ಸಚಿವ ವೀರಕುಮಾರ ಪಾಟೀಲ,ಕೆಆರ್‍ಡಿಸಿಎಲ್ ಮಾಜಿ ಉಪಾಧ್ಯಕ್ಷ ಮಹಾವೀರ ಮೋಹಿತೆ,ನಾಗರಮುನ್ನೋಳ್ಳಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶಂಕರಗೌಡ ಪಾಟೀಲ, ತಾ.ಪಂ ಸದಸ್ಯ ರಾಜು ಪಾಟೀಲ,ಸದಾಶಿವ ದೇಶಿಂಗೆ,ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ರಾಜು ಕೋಟಗಿ, ಈರಗೌಡ ಪಾಟೀಲ (ಶೇಟೆಪ್ಪಗೋಳ), ಲಗಮಣ್ಣ ಹಂಚಿನಾಳೆ, ಶೇಖರ ಬಂಬಲವಾಡೆ, ಪ್ರಭಾಕರ ಕಳಸಣ್ಣವರ, ಸುಭಾಷ ಬಂಬಲವಾಡೆ, ಅಜೀತ ಪಾಟೀಲ, ಶೇಖರ ಬಂಬಲವಾಡೆ, ಈರಯ್ಯ ಗೋಟೂರಮಠ  ಇತರರು ಉಪಸ್ಥಿತರಿದ್ದರು.

ಸುದ್ದಿ ಓದಿ