ಧಾರವಾಡದಲ್ಲಿ ಶೀಘ್ರದಲ್ಲಿಯೇ ಕ್ರೀಡಾ ಸಂಕೀರ್ಣ ಪ್ರಾರಂಭ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಧಾರವಾಡದಲ್ಲಿ ಶೀಘ್ರದಲ್ಲಿಯೇ ಕ್ರೀಡಾ ಸಂಕೀರ್ಣ ಪ್ರಾರಂಭ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ Sports complex to open soon in Dharwad: Union Minister Pralhad Joshi

ಲೋಕದರ್ಶನ ವರದಿ 

 ಧಾರವಾಡ 17: ಮಲ್ಲಕಂಭ ಕ್ರೀಡೋತ್ಸವ ಧಾರವಾಡ ಜಿಲ್ಲೆಯ ಜಿಲ್ಲಾ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿರುವುದು ಸಂತಸದ ಸಂಗತಿ. ಈ ಕ್ರೀಡಾ ಸಂಕೀರ್ಣವನ್ನು ಬಹಳ ಪ್ರಯತ್ನದೊಂದಿಗೆ ಧಾರವಾಡದಲ್ಲಿ ನಿರ್ಮಿಸಲಾಗಿದೆ. ಕ್ರೀಡಾ ಸಂಕೀರ್ಣದಲ್ಲಿ ಕೆಲವೊಂದು ನ್ಯೂನ್ಯತೆಗಳನ್ನು ಸರಿಪಡಿಸಿ, ಟೆಂಡರ ಪ್ರಕ್ರೀಯೆ ನಡೆಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕ್ರೀಡಾ ಸಂಕೀರ್ಣವನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಹೇಳಿದರು. 

ಅವರು ಇಂದು (ಜು.17) ಬೆಳಿಗ್ಗೆ ನೂತನ ಕ್ರೀಡಾ ಸಂಕೀರ್ಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಧಾರವಾಡ ಹಾಗೂ ಕರ್ನಾಟಕ ರಾಜ್ಯ ಅಮೆಚೂರ ಮಲ್ಲಕಂಭ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಮಲ್ಲಕಂಭ ಕ್ರೀಡೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಮಲ್ಲಕಂಭ ಕ್ರೀಡೆಯು ಇತ್ತೀಚಿನ ಕ್ರೀಡೆಯಲ್ಲ. ಇದು ಬಹಳ ಹಿಂದಿನ ಕಾಲದ ರಾಮಾಯಣ ಪುರಾಣಗಳಲ್ಲಿ ಮಾನಸ-ಉಲ್ಲಾಸ ಗ್ರಂಥಗಳಲ್ಲಿ ಇರುವುದು. ಈ ಕ್ರೀಡೆಯಲ್ಲಿ ಮಾನಸಿಕ ಏಕಾಗ್ರತೆ ಬಹಳ ಮುಖ್ಯವಾಗಿದೆ. ಈ ಮಲ್ಲಕಂಭ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ 14 ಜಿಲ್ಲೆಯ ಒಟ್ಟು 252 ಕ್ರೀಡಾಪಟುಗಳು ಭಾಗವಹಿಸಿದ್ದಾರೆ ಎಂದು ಹೇಳಿದರು.  

ಬಾಜಿರಾವ್ ಪೇಶ್ವೆಯವರ ಗುರುಗಳಾದ ಬಾಳಭಟ್ಟ ಈ ಕಲೆಯನ್ನು ಪುನರುಜ್ಜೀವನಗೊಳಿಸಿ ಸೈನಿಕರಿಗೆ ಮನೋಬಲವನ್ನು ತುಂಬಿಸಲಿಕ್ಕೆ ಮತ್ತು ಹೊರಾಟದ ಕೆಚ್ಚನ್ನು ಹೆಚ್ಚಿಸಲಿಕ್ಕೆ ಹಾಗೂ ಸೈನಿಕರ ಏಕಾಗ್ರತೆಯನ್ನು ಹೆಚ್ಚಿಸಲಿಕ್ಕೆ ಈ ಕ್ರೀಡೆಯನ್ನು ನಮ್ಮ ಭಾಗದಲ್ಲಿ ಹೆಚ್ಚು ಪ್ರಚಲಿತ ಪಡಿಸಿದರು. ಪ್ರಧಾನ ಮಂತ್ರಿಗಳು ಮಲ್ಲಕಂಭ ಕ್ರೀಡೆಯನ್ನು ಖೇಲೋ ಇಂಡಿಯಾ ಕ್ರೀಡೆಯಲ್ಲಿ ಸೇರೆ​‍್ಡಗೊಳಿಸಿದರು. ಹಾಗೂ ಇದನ್ನು ಆದಿವಾಸಿಗಳು (ಬುಡಕಟ್ಟು ಜನಾಂಗದವರಿಗೂ) ಸಹ ಮಲ್ಲಕಂಭ ಕ್ರೀಡೆಯನ್ನು ಆಡಲು ಅನುಕೂಲ ಮಾಡಿಕೊಟ್ಟರು ಎಂದು ಹೇಳಿದರು.