ಕ್ರೀಡಾ ಕೂಟ: ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಇಂಡಿ: ತಾಲೂಕಾ ಮಟ್ಟದ ಪ್ರೌಢಶಾಲೆಗಳ ಕ್ರೀಡಾ ಕೂಟದಲ್ಲಿ ತಾಲೂಕಿನ ಸಾಲೋಟಗಿ ಗ್ರಾಮದ ಶ್ರೀ ಶಿವಯೋಗೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 4*100 ಮಿ.ಓಟದಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಮಾರ ಅಮೀರ ತಾಂಬೋಳಿ 200 ಮೀಟರ ಪ್ರಥಮ, 40 ಮೀಟರ ಓಟದಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನಗಳಿಸಿ ಸಮಗ್ರ ವೀರಗ್ರಹಣೆ ಪ್ರಶಸ್ತಿಗೆ ಬಾಜನನಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಆಕಾಶ ಕೋಣಶಿರಸಂಗಿ 1500 ಮೀಟರ ಓಟದಲ್ಲಿ ದ್ವಿತಿಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಕುಮಾರಿ ರೇಖಾ ಕಾಳೆ 200 ಮೀಟರ ಓಟದಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅಲ್ಲಮಾ ವಾಲಿಕಾರ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಆಯ್ಕೆಯಾಗ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿಯವರು, ಶಾಲಾ ಸಿಬ್ಬಂದಿ ಅಭಿನಂದಿಸಿ ಹಾರೈಸಿದ್ದಾರೆ.