ಇಂಡಿ

ಕ್ರೀಡಾ ಮನೋಭಾವನೆ ಬೆಳೆಸಲು ಕ್ರೀಡಾಕೂಟಗಳ ಅವಶ್ಯಕತೆ ಇದೆ: ಕಾಮಗೊಂಡ

ಕ್ರೀಡಾ ಮನೋಭಾವನೆ ಬೆಳೆಸಲು ಕ್ರೀಡಾಕೂಟಗಳ ಅವಶ್ಯಕತೆ ಇದೆ: ಕಾಮಗೊಂಡ

ಇಂಡಿ05: ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಕ್ರೀಡಾ ಮನೋಭಾವನೆ ಬೆಳೆಸಲು ಕ್ರೀಡಾಕೂಟಗಳ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗಿಯಾಗುವುದರಿಂದ ದೈಹಿಕವಾಗಿ ಸದೃಢರಾಗುತ್ತಾರೆ. ಹಾಗೆಯೇ ಸದೃಢ ಶರೀರವಿದ್ದಾಗ ಮಾನಸಿಕವಾಗಿಯೂ ಸದೃಢರಾಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳನ್ನು ಕ್ರೀಡೆಗಳಲ್ಲಿ ತೊಡಗಲು ಕಾಲೇಜುಗಳ ದೈಹಿಕ ಶಿಕ್ಷಕರು ಹಾಗೂ ಪ್ರಾಚಾರ್ಯರು ಪ್ರೇರಿಸಬೇಕೆಂದು  ಸಿ.ವಿ. ರಾಮನ್ ಕಾಲೇಜು ಸಂಸ್ಥಾಪಕ ಶಿವಾನಂದ ಕಾಮಗೊಂಡ ಹೇಳಿದರು. 

ಪಟ್ಟಣದ ಸಿಂದಗಿ ರಸ್ತೆಯ ಸಿ.ವಿ. ರಾಮನ್ ಕಾಲೇಜಿನಲ್ಲಿ ಶುಕ್ರವಾರ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕಾಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಯಿತು. 

ಲಚ್ಯಾಣ ಪ.ಪೂ ಕಾಲೇಜು ಪ್ರಾಚಾರ್ಯ ಡಿ.ಆರ್‌. ಮಠಪತಿ, ಸಿ.ಎಸ್‌. ಕಣ್ಮೇಶ್ವರ, ಎಸ್‌.ಬಿ. ಪಾಟೀಲ, ಜೆ.ಡಿ. ಪೂಜಾರಿ, ವಿನಯ ಬೊಮ್ಮಗೊಂಡ ಸೇರಿದಂತೆ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಸುದ್ದಿ ಓದಿ