ಹೊಸಪೇಟೆ

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟ

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟ

ಹೊಸಪೇಟೆ 13: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಜಯನಗರ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟವನ್ನು ಜು.15 2024 ಮತ್ತು ಜು.16 .2024 ರಂದು ಹೊಸಪೇಟೆ ನಗರದ ಡಾಽಽ ಪುನೀತ್ ರಾಜ್‌ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಈ ಕ್ರೀಡಾ ಕೂಟದಲ್ಲಿ ಜಿಲ್ಲೆಯ ತಾಲೂಕುಗಳಾದ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ ಮತ್ತು ಹಡಗಲಿ ತಾಲೂಕುಗಳಿಂದ ಒಟ್ಟು 600 ಜನ ಸರ್ಕಾರಿ ನೌಕರರ ಕ್ರೀಡಾ ಪಟುಗಳು ನೊಂದಾಯಿಸಿಕೊಂಡು ಭಾಗವಹಿಸುತ್ತಾರೆ. 

ಕ್ರೀಡಾ ಕೂಟಕ್ಕೆ ವಿಜಯನಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಹೆಚ್‌.ಆರ್‌.ಗವಿಯಪ್ಪನವರು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಶಾಸಕರುಗಳು, ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್ ಭಾ.ಆ.ಸೇ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿಬಾಬು ಬಿ.ಎಲ್‌. ಅಪರ ಜಿಲ್ಲಾಧಿಕಾರಿ ಅನುರಾಧ.ಜಿ. , ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ, ಜಿಲ್ಲೆಯ ಎಲ್ಲಾ ಇಲಾಖೆಯ ಮುಖ್ಯಸ್ಥರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆಂದು ಜಿಲ್ಲಾಧ್ಯಕ್ಷ ಜಿ.ಮಲ್ಲಿಕಾರ್ಜುನ ಗೌಡರವರು ತಿಳಿಸಿದರು.  

ಜು.11.2024ರಂದು ಶಾಸಕರ ಕಛೇರಿಯಲ್ಲಿ ವಿಜಯನಗರ ಕ್ಷೇತ್ರದ ಶಾಸಕ ಹೆಚ್‌.ಆರ್‌.ಗವಿಯಪ್ಪರವರು ಕ್ರೀಡಾ ಕೂಟದ ಕ್ಯಾಪ್‌ಗಳನ್ನು ಬಿಡುಗಡೆ ಮಾಡಿ ಕ್ರೀಡಾ ಕೂಟ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.  


. 


ಸುದ್ದಿ ಓದಿ