ಹೂವಿನ ಹಡಗಲಿ

ಕಲಿಕೆ ಜೊತೆಗೆ ಕ್ರೀಡೆಗೆ ಮಹತ್ವ ಅಗತ್ಯ: ಶಾಸಕ ಎಲ್ ಕೃಷ್ಣನಾಯಕ

ಕಲಿಕೆ ಜೊತೆಗೆ ಕ್ರೀಡೆಗೆ ಮಹತ್ವ ಅಗತ್ಯ: ಶಾಸಕ ಎಲ್ ಕೃಷ್ಣನಾಯಕ

ಹೂವಿನ ಹಡಗಲಿ 11: ಬದುಕಿಗೆ ಓದು ಎಷ್ಟು ಮುಖ್ಯವೋ ಕ್ರೀಡೆ ಸಹ ಅಷ್ಟೇ ಮುಖ್ಯ ಎಂದು ಶಾಸಕ ಎಲ್ ಕೃಷ್ಣನಾಯಕ ಅಭಿಮತ ವ್ಯಕ್ತಪಡಿಸಿದರು. 

ಪಟ್ಟಣದ ಜಿ ಪಿ ಜಿ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ 14 ಹಾಗೂ 17ವಯಸ್ಸಿನ ಒಳಗಿನ ತಾಲೂಕು ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಆಟಗಳಲ್ಲಿ ತೊಡಗಿಸಿಕೊಂಡರೆ ಆರೋಗ್ಯ ವೃದ್ಧಿಯಾಗುತ್ತದೆ. ರಾಜ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ತಿಳಿಸಿದರು. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು. 

ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಯುವ ಮುಖಂಡ ಪುನೀತ್ ದೊಡ್ಡಮನಿ ಉಪಸ್ಥಿತರಿದ್ದರು. 

ತಾಲೂಕು ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್ ಪ್ರಮಾಣ ವಚನ ಬೋಧಿಸಿದರು.ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶಿವಲಿಂಗಪ್ಪ, ರಾಜ್ಯ ಸಹ ಕಾರ್ಯದರ್ಶಿ ಗಡ್ಡಿ ಶಿವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ ಬಿ ಜಗದೀಶ್, ಬಡ್ತಿ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಡಿ ವಿರುಪಣ್ಣ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ಬಳ್ಳಾರಿ, ಎಂ ಶಿವಪ್ಪ ಯಂಕಾನಾಯ್ಕ, ಶೇಕ್ ಅಹಮದ್ದ್ವಾರಕೀಶ್ ರೆಡ್ಡಿ ಎಸ್ ಇತರರು ಇದ್ದರು. ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ದೇಸಾಯಿ ವಸತಿ ಪ್ರಾಥಮಿಕ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ