ವಿಶೇಷಚೇತನರಿಗೆ ಕ್ರೀಡಾ ತರಬೇತಿ ಕಾರ್ಯಾಗಾರ

ವಿಶೇಷಚೇತನರಿಗೆ ಕ್ರೀಡಾ ತರಬೇತಿ ಕಾರ್ಯಾಗಾರ  Sports training workshop for persons with disabilities


ಕೊಪ್ಪಳ, ಆ.25: ಅನಿಕೇತನ ಫೌಂಡೇಶನ್, ಬೆಂಗಳೂರು ವತಿಯಿಂದ ಜಿಲ್ಲಾ ಪಂಚಾಯಿತಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶೇಷಚೇತನರಿಗೆ ಮೂರು ದಿನಗಳ ಕ್ರೀಡಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.  

ಆ.27ರಿಂದ 29ರವರೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ಅನಿಕೇತನ ಫೌಂಡೇಶನ್ನ ಸಿಇಒ ಕುಮಾರಿ ಧರಣಿ ಬಿ.ಸಿ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.  

ಕೊಪ್ಪಳ ಜಿಲ್ಲೆಯ ವಿಶೇಷಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಆ.27ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಗವಿಮಠದ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ.  

ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಉನ್ನತ ಮಟ್ಟದ ಮತ್ತು ಜಿಲ್ಲಾ ಆಡಳಿತದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.  

ಕಾರ್ಯಕ್ರಮದ ಸಂಯೋಜಕರಾದ ಅನಿಕೇತನ ಫೌಂಡೇಶನ್ನ ಸಿಇಒ ಕುಮಾರಿ ಧರಣಿ ಬಿ.ಸಿ. ಅವರು ಎಲ್ಲರನ್ನೂ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕ್ರೀಡಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.