ತಹಶೀಲ್ದಾರ ಕಚೇರಿ ಸಭಾ ಭವನದಲ್ಲಿ ಶ್ರೀ ಗೌತಮ ಬುದ್ಧ ಜಯಂತಿ ಕಾರ್ಯಕ್ರಮ
Sri Gautam Buddha Jayanti program at Tahsildar's office Sabha Bhavan
ಯರಗಟ್ಟಿ 01: ಪಟ್ಟಣದ ತಹಶೀಲ್ದಾರ ಕಚೇರಿ ಸಭಾ ಭವನದಲ್ಲಿ ಶ್ರೀ ಗೌತಮ ಬುದ್ಧರ ಜಯಂತಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗಣ್ಯರು ಬುದ್ಧರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಬುದ್ಧರ ಶಾಂತಿ, ಕರುಣೆ ಮತ್ತು ಸಮಾನತೆಯ ಸಂದೇಶಗಳು ಇಂದಿಗೂ ಜಗತ್ತಿನಾದ್ಯಂತ ಮಹತ್ವ ಪಡೆದಿವೆ ಎಂದು ಹೇಳಿದರು. ಬುದ್ಧರ ತತ್ವಗಳು ಕೇವಲ ಆಚರಣೆಗೆ ಸೀಮಿತವಾಗದೇ, ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಅವರು ಒತ್ತಿ ಹೇಳಿದರು.
ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಈರಣ್ಣಾ ಹೂಲ್ಲೂರ ಮಾತನಾಡಿ, ಬುದ್ಧರು ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದು, ಅವರ ಸಂದೇಶಗಳು ಜಗತ್ತಿನಲ್ಲಿ ಶಾಂತಿ ನೆಲೆಸಲು ಕಾರಣವಾಗಿವೆ ಹಾಗೂ ಸಮಾಜದಲ್ಲಿ ಶಾಂತಿ ಮತ್ತು ಸಮಾನತೆ ಸ್ಥಾಪನೆಗೆ ಬುದ್ಧರ ಚಿಂತನೆಗಳನ್ನು ಅನುಸರಿಸುವುದು ಅವಶ್ಯಕ ಎಂದು ಹೇಳಿದರು.ಈ ಸಂದರ್ಭದಲ್ಲಿ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಎಪಿಎಂಸಿ ಸದಸ್ಯ ರಫೀಕ ಡಿಕೆ, ಫಿರೋಜ ಖಾದ್ರಿ, ಸ್ವರೂಪ ಚಪಳಿ, ಮಂಜುನಾಥ ಬಡಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 