ಬಾವಿಹಳ್ಳಿಯಲ್ಲಿ ಶ್ರೀ ಗುರು ಕರಿಬಸವೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ
Sri Guru Karibasaveshwara Swamy Palanquin Procession at Bavihalli
ಹೂವಿನಹಡಗಲಿ, ಸೆ. 07: ತಾಲೂಕಿನ ಬಾವಿಹಳ್ಳಿ ಗ್ರಾಮದಲ್ಲಿ ಶ್ರಾವಣ ಮಾಸದ ಕೊನೆಯ ನಾಲ್ಕನೇ ಸೋಮವಾರದ ಅಂಗವಾಗಿ ಶ್ರೀ ಗುರು ಕರಿಬಸವೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವವು ಸಡಗರ ಹಾಗೂ ಸಂಭ್ರಮದಿಂದ ನಡೆಯಿತು.
ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಭಕ್ತಿ ಸಮರ್ಿಸಿದರು. ಮಲ್ಲಿಗೆ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿದ್ದ ಪಲ್ಲಕ್ಕಿಯ ಭವ್ಯ ಮೆರವಣಿಗೆ ಬಾವಿಹಳ್ಳಿ ಗ್ರಾಮದಿಂದ ಆರಂಭವಾಗಿ ಹೊಳಗುಂದಿ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ ಮುಕ್ತಾಯಗೊಂಡಿತು.
ಮೆರವಣಿಗೆಯಲ್ಲಿ ಸಮಾಳ, ನಂದಿಕೋಲು ಸೇರಿದಂತೆ ವಿವಿಧ ಮಂಗಳವಾದ್ಯಗಳು ಮೊಳಗಿದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವದ ಮೆರವಣಿಗೆ ವಿಜೃಂಭಣೆಯಿಂದ ಸಾಗಿತು. ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
ಬೆಳಗ್ಗೆ ಶ್ರೀ ಗುರು ಕರಿಬಸವೇಶ್ವರ ಸ್ವಾಮಿಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ನೂರಾರು ಭಕ್ತರು ಉತ್ಸವದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬಾವಿಹಳ್ಳಿ ದೇವಸ್ಥಾನದ ಕ್ರಿಯಾಮೂರ್ತಿಗಳಾದ ಎಚ್.ಎಂ. ಪ್ರಸನ್ನ ಸ್ವಾಮಿ, ದೇವಸ್ಥಾನದ ಅಧ್ಯಕ್ಷ ಎಚ್.ಎಂ. ಕೊಟ್ರದೇವರು, ಸದಸ್ಯರಾದ ಕುಮಾರ, ಬಸವರಾಜ, ಕೆ. ಮಲ್ಲಿಕಾರ್ಜುನ, ಎಲ್. ರವಿಕುಮಾರ್, ಎ. ರಮೇಶ್, ಪ್ರಕಾಶ್, ಬಿ. ಕಲ್ಲಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 