ಶ್ರೀ ಕುಮಾರೇಶ್ವರ ಮಹಾವಿದ್ಯಾಲಯದ ಬಾಲಕಿಯರ ಕಬಡ್ಡಿ ತಂಡಕ್ಕೆ ಪ್ರಥಮ ಸ್ಥಾನ
ಸವದತ್ತಿ 09: ತಾಲೂಕ ಮಟ್ಟದ ಪದವಿ ಪೂರ್ವ ಮಹಾವಿದ್ಯಾಲಯದ ಕ್ರೀಡಾಕೂಟದಲ್ಲಿ ಶ್ರೀ ಕುಮಾರೇಶ್ವರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ಬಾಲಕಿಯರ ಕಬಡ್ಡಿ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ್ಘ ಬಾಲಕರ ಖೋಖೋ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಬಾಲಕಿಯರ ಖೋಖೋ ವಿಭಾಗದಲ್ಲಿ ಮೂರು ವಿದ್ಯಾರ್ಥಿನಿಯರು ್ಘ ಬಾಲಕರ ಖೋಖೋ ವಿಭಾಗದಲ್ಲಿ ಐದು ಜನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವೈಯಕ್ತಿಕ ಆಟಗಳಲ್ಲಿ 3000 ಮೀ, 400 ಮೀ, ತ್ರಿವಿಧ ಜಗಿತ, ಉದ್ದಜಿಗಿತ, ಜಾವಲಿನ, ಹ್ಯಾಮರ, 110 ಹರ್ಡಲ್ಸ್, 400 ಮೀ ಹರ್ಡಲ್ಸನಲ್ಲಿ ಹಾಗೂ 4*100 ರಿಲೇಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳಿಸಿ ಒಟ್ಟು 40 ಜನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದುಪ್ರಾಚಾರ್ಯ ಕೆ.ಬಿ.ಕೋರಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸಂಸ್ಥೆಯ ಚೇರಮನ್ನರಾದ ಸದಾಶಿವ ಕೌಜಲಗಿ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಮತ್ತು ಕಾಲೇಜಿನ ದೈಹಿಕ ನಿರ್ದೇಶಕರಾದ ಬಿ.ಎ.ಬಳಿಗಾರ, ಎಸ್.ಬಿ.ಕೊಳ್ಳಿ ಕಾಲೇಜು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.