ಅಂತರರಾಷ್ಟ್ರೀಯ

ಶ್ರೀಲಂಕಾ: ಭಾರೀ ಮಳೆಗೆ 16 ಮಂದಿ ಸಾವು, ಸಾವಿರಾರು ಜನರ ಸ್ಥಳಾಂತರ

ಶ್ರೀಲಂಕಾ: ಭಾರೀ ಮಳೆಗೆ 16 ಮಂದಿ ಸಾವು, ಸಾವಿರಾರು ಜನರ ಸ್ಥಳಾಂತರ

ಕೊಲಂಬೊ : ನ. 10: ಶ್ರೀಲಂಕಾದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇದರಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

5,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದ್ದು, ಅವರು ಸಂಬಂಧಿಕರ ಮನೆಗಳಲ್ಲಿ ಅಥವಾ ಸರ್ಕಾರ ನಡೆಸುತ್ತಿರುವ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಪ್ರವಾಹದ ನೀರಿನಲ್ಲಿ ಮುಳುಗಿ ಮತ್ತು ಸಿಡಿಲಿನ ಹೊಡೆತಕ್ಕೆ ಹೆಚ್ಚಿನ ಸಾವುಗಳು ಸಂಭವಿಸಿವೆ. ಕನಿಷ್ಠ ಓರ್ವ ವ್ಯಕ್ತಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಸಾಮಾನ್ಯವಾಗಿ ಶ್ರೀಲಂಕಾದಲ್ಲಿ ಈಶಾನ್ಯ ಮಾನ್ಸೂನ್​ ಬರುತ್ತದೆ. ಆದರೆ, ಈ ವರ್ಷ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ದಾಖಲಾಗಿದೆ.

ಸುದ್ದಿ ಓದಿ