ದಿ. 11ರಂದು ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ
Sri Mallikarjuna Devara Jatra Mahotsav on the 11th
ಬ್ಯಾಡಗಿ 06: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕ ಆಣೂರ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಹಾಗೂ ಸರ್ವ ಶರಣರ ಸಮ್ಮೇಳನ ಜರುಗುವುದು. ದಿ. 11ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಪುಷ್ಪ ರಥೋತ್ಸವ ಬಹು ವಿಜೃಂಭಣೆಯಿಂದ ಜರುಗುವುದು. 12ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಮಹಾ ರಥೋತ್ಸವ ಡೊಳ್ಳು ಬಾಜಾ ಭಜಂತ್ರಿ ಸಕಲ ವಾದ್ಯವೈಭವಗಳೊಂದಿಗೆ ಅತೀ ವಿಜೃಂಭಣೆಯಿಂದ ಜರುಗುವುದು.
ಅದೇ ದಿವಸ ಗುರುವಾರ ಮುಂಜಾನೆ 11-00 ಗಂಟೆಗೆ ಸ್ಥಳ: ಶ್ರೀ ಮಲ್ಲಿಕಾರ್ಜುನ ರಂಗಮಂದಿರ, ಆಣೂರ ಶ್ರೀಮುದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ತರಳುಬಾಳು ಜಗದ್ಗುರು ಶ್ರೀ 1108 ಶ್ರೀ ಡಾ: ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಬೃಹನದಮಠ, ಸಿರಿಗೆರೆ. ಹಾಗೂ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಪಟ್ಟಾಧ್ಯಕ್ಷರು, ಶ್ರೀ ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿ. ಸ್ವಾಮಿಜಿಗಳಿಂದ ಆಸೀರವಚನ ಕಾರ್ಯಕ್ರಮ ಜರಗುವುದು ಎಂದು ಗ್ರಾಮದ ಸದಭಕ್ತರಾದ ಮೃತುಂಜಯ್ಯ ಕೊಪ್ಪದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 